ಹೆಚ್.ಡಿ.ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ
ಬೆಂಗಳೂರು, 8 ಮೇ (ಹಿ.ಸ):ಆ್ಯಂಕರ್:ಮಹಿಳೆಯೊಬ್ಬರ ಅಪಹರಣ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆ
14-days-judicial-custody-for-hd-revanna/


ಬೆಂಗಳೂರು, 8 ಮೇ (ಹಿ.ಸ):ಆ್ಯಂಕರ್:ಮಹಿಳೆಯೊಬ್ಬರ ಅಪಹರಣ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನಗರದ 17ನೇ ಎಸಿಎಂಎಂ ನ್ಯಾಯಾಲಯ ಒಪ್ಪಿಸಿದೆ.

17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು, ರೇವಣ್ಣ ಅವರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ. ರೇವಣ್ಣ ಅವರನ್ನು ಎಸ್ಐಟಿ ವಶಕ್ಕೆ ನೀಡಿದ್ದ ಅವಧಿ ಇಂದಿಗೆ ಮುಗಿದಿತ್ತು. ಕಳೆದ ಶನಿವಾರ ಎಸ್ ಐ ಟಿಯಿಂದ ಬಂಧಿಸಲಾಗಿರುವ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಭಾನುವಾರ ಹಾಜರು ಪಡಿಸಲಾಗಿತ್ತು.

ಹಿಂದೂಸ್ತಾನ್ ಸಮಾಚಾರ್


 rajesh pande