ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮ ಪ್ರಶಸ್ತಿ ಪ್ರದಾನ
ನವದೆಹಲಿ, 9 ಮೇ (ಹಿ.ಸ):ಆ್ಯಂಕರ್:ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರ
President Droupadi Murmu will present 


ನವದೆಹಲಿ, 9 ಮೇ (ಹಿ.ಸ):ಆ್ಯಂಕರ್:ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪದ್ಮ ಪ್ರಶಸ್ತಿಗಳನ್ನ ಪ್ರದಾನ ಮಾಡಲಿದ್ದಾರೆ. ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಯನ್ನ ಕಲೆ, ಸಾಮಾಜಿಕ ಕಾರ್ಯ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ ಮತ್ತು ಎಂಜಿನಿಯರಿಂಗ್, ವ್ಯಾಪಾರ ಮತ್ತು ಉದ್ಯಮ, ವೈದ್ಯಕೀಯ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ ಮತ್ತು ನಾಗರಿಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಕಳೆದ ಏಪ್ರಿಲ್ ೨೨ರಂದು ರಾಷ್ಟ್ರಪತಿಗಳು ಮೂರು ಪದ್ಮ ವಿಭೂಷಣ, ೮ ಪದ್ಮಭೂಷಣ ಹಾಗೂ ೫೫ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಹಿಂದೂಸ್ತಾನ್ ಸಮಾಚಾರ್


 rajesh pande