ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು, 9 ಮೇ (ಹಿ.ಸ):ಆ್ಯಂಕರ್: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಅಥವಾ kseab.karnataka.gov.in ನಲ್ಲಿ ನೇರ ಲಿಂಕ್ ಮೂಲಕವೂ ಪರಿಶೀಲಿಸಬಹುದು.


ಬೆಂಗಳೂರು, 9 ಮೇ (ಹಿ.ಸ):ಆ್ಯಂಕರ್:

2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಕೂಡ ವೀಕ್ಷಿಸಬಹುದಾಗಿದೆ.

ಕರ್ನಾಟಕದಲ್ಲಿ ಈ ಸಲ ಎಸ್ ಎಸ್ ಎಲ್ ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 4.41 ಲಕ್ಷ ಬಾಲಕರು, 4.28 ಬಾಲಕಿಯರು. ಅಲ್ಲದೆ, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಕರ್ನಾಟಕದ 2,750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.

ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶವನ್ನು ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್ ಸೈಟ್ karresults.nic.in ನಲ್ಲಿ ಅಥವಾ kseab.karnataka.gov.in ನಲ್ಲಿ ನೇರ ಲಿಂಕ್ ಮೂಲಕವೂ ಪರಿಶೀಲಿಸಬಹುದು.

ಹಿಂದೂಸ್ತಾನ್ ಸಮಾಚಾರ್


 rajesh pande