ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬರುವ ವಿಚಾರದಲ್ಲಿ ಯಾವುದೇ ಸಂದೇಹ ಇಲ್ಲ -ಅಮಿತ್ ಶಾ
ಬೊಂಗೀರ್, 9 ಮೇ (ಹಿ.ಸ):ಆ್ಯಂಕರ್: ಲೋಕಸಭಾ ಚುನಾವಣೆಯಲ್ಲಿ ಮತ್ತೆ ಗೆದ್ದು ನಾವು ಅಧಿಕಾರಕ್ಕೆ ಬರುವ ವಿಚಾರದಲ್
 ಅಮಿತ್ ಶಾ


ಬೊಂಗೀರ್, 9 ಮೇ (ಹಿ.ಸ):ಆ್ಯಂಕರ್:

ಲೋಕಸಭಾ ಚುನಾವಣೆಯಲ್ಲಿ ಮತ್ತೆ ಗೆದ್ದು ನಾವು ಅಧಿಕಾರಕ್ಕೆ ಬರುವ ವಿಚಾರದಲ್ಲಿ ಯಾವುದೇ ಸಂದೇಹ ಬೇಡ. ಜೂನ್ 4, ಮಧ್ಯಾಹ್ನ 12.30ರ ಹೊತ್ತಿಗೆ ನಾವು 400 ಸೀಟ್ ಗೆದ್ದು ನಮ್ಮ ಗುರಿ ತಲುಪಲಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಖಚಿತ ವಿಶ್ವಾಸದ ಮಾತನ್ನಾಡಿದ್ದಾರೆ.

ತೆಲಂಗಾಣದಲ್ಲಿ ಇದೇ ೧೩ರಂದು ನಡೆಯಲಿರುವ ಚುನಾವಣೆಗೆ ಕೇವಲ ೩ ದಿನಗಳು ಬಾಕಿಯಿದ್ದು, ವಿವಿಧ ಪಕ್ಷಗಳ ಪ್ರಮುಖ ನಾಯಕರು, ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬೊಂಗೀರ್ ಲೋಕಸಭಾ ಕ್ಷೇತ್ರದಲಿಂದು ಪಕ್ಷದ ಅಭ್ಯರ್ಥಿ ಪ್ರಚಾರ ನಡೆಸಿದರು.

‘ಈ ಬಾರಿಯ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮೈತ್ರಿ ಒಂದು ವೇಳೆ ದೇಶದಲ್ಲಿ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಬ್ರಿ ಬೀಗವನ್ನು ಹಾಕಲಾಗುತ್ತದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಪಕ್ಷಗಳ ವಿರುದ್ಧ ಗುಡುಗಿದ್ದಾರೆ. ಬೊಂಗೀರ್ ಲೋಕಸಭಾ ಕ್ಷೇತ್ರ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಶಾ, ಕಾಂಗ್ರೆಸ್ನವರು 70 ವರ್ಷಗಳಿಂದ ಮಂದಿರದ ವಿವಾದವನ್ನು ಹಾಗೆಯೇ ಮುಂದುವರೆಸಿಕೊಂಡು ಬಂದಿದ್ದರು. ಅವರ ಮತಬ್ಯಾಂಕ್ ಯಾರೆಂದು ಎಲ್ಲರಿಗೂ ತಿಳಿದಿದೆ. ಶ್ರೀರಾಮನ ಕೆಲಸದಿಂದ ಹಿಂದೆ ಸರಿಯುವವರನ್ನು ಉತ್ತರ ಪ್ರದೇಶ ಎಂದಿಗೂ ಕ್ಷಮಿಸುವುದಿಲ್ಲ’ ಎಂದು ಶಾ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ರಾಹುಲ್ ಗಾಂಧಿ ಅವರನ್ನು 20 ಬಾರಿ ರಾಜಕೀಯದಲ್ಲಿ ಲಾಂಚ್ ಮಾಡಲು ಪ್ರಯತ್ನಿಸಿದರು. ಆದರೆ ಪ್ರತಿ ಪ್ರಯತ್ನದಲ್ಲೂ ಅವರಿಗೆ ಸೋಲಾಯಿತು. ಇದೀಗ ಇದೀಗ ರಾಹುಲ್ ಗಾಂಧಿ ರಾಯ್ಬರೇಲಿಯಿಂದ ಕಣಕ್ಕಿಳಿದಿದ್ದು, ಈ ಬಾರಿಯೂ ಅವರನ್ನು ರಾಜಕೀಯ ಮುನ್ನಲೆಗೆ ತರುವ ಪ್ರಯತ್ನ ವಿಫಲವಾಗಲಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ವ್ಯಂಗ್ಯವಾಡಿದರು.

ಹಿಂದೂಸ್ತಾನ್ ಸಮಾಚಾರ್


 rajesh pande