ಇಂದು ಜೆಡಿಎಸ್ ಕೋರ್ ಕಮಿಟಿ ಸಭೆ
ಬೆಂಗಳೂರು, 9 ಮೇ (ಹಿ.ಸ):ಆ್ಯಂಕರ್:ಜೆಡಿಎಸ್ ನ ಕೋರ್ ಕಮಿಟಿ ಸಭೆ ಇಂದು ನಡೆಯಲಿದ್ದು, ಸಂಸದ ಪ್ರಜ್ವಲ್ ರೇವಣ್ಣ
ommittee-meeting-today-prajwal-revanna-case/


ಬೆಂಗಳೂರು, 9 ಮೇ (ಹಿ.ಸ):ಆ್ಯಂಕರ್:ಜೆಡಿಎಸ್ ನ ಕೋರ್ ಕಮಿಟಿ ಸಭೆ ಇಂದು ನಡೆಯಲಿದ್ದು, ಸಂಸದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ.

ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಲಿದೆ.ಈಗಾಗಲೇ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದ ವರಿಷ್ಠರ ಆದೇಶದ ಮೇರೆಗೆ ಅಮಾನತು ಮಾಡಲಾಗಿದೆ. ಅಮಾನತು ಬದಲಾಗಿ ಪಕ್ಷಕ್ಕೆ ಆಗಿರುವ ಮುಜುಗರದಿಂದ ತಪ್ಪಿಸಿಕೊಳ್ಳಲು ಉಚ್ಚಾಟನೆ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ.

ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರಜ್ವಲ್ ವಿರುದ್ಧ ಕಠಿಣ ಶಿಕ್ಷೆ ಬಗ್ಗೆ ಪ್ರಸ್ತಾಪ ಬೆನ್ನಲ್ಲೇ ಪ್ರಜ್ವಲ್ ಉಚ್ಚಾಟನೆ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ. ಉಚ್ಚಾಟನೆ ಮಾಡುವುದು ಪಕ್ಕಾ. ಆದರೆ ಫಲಿತಾಂಶ ಮುಂಚೆಯೋ ಅಥವಾ ನಂತರವೋ ಎನ್ನುವುದು ಕುತೂಹಲ ಮೂಡಿಸಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande