ವಾಲ್ಮೀಕಿ ಹಗರಣ: ಶಾಸಕ ನಾಗೇಂದ್ರ ಇಡಿ ವಶಕ್ಕೆ
ಬೆಂಗಳೂರು, 12 ಜುಲೈ (ಹಿಂ.ಸ.) : ಆ್ಯಂಕರ್ : ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮದ 187 ಕೋಟಿ ರೂ. ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ

sdifi


ಬೆಂಗಳೂರು, 12 ಜುಲೈ (ಹಿಂ.ಸ.)

: ಆ್ಯಂಕರ್ : ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮದ 187 ಕೋಟಿ ರೂ. ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ವಶಕ್ಕೆ ಪಡೆದುಕೊಂಡರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಪ್ರಕರಣದಲ್ಲಿ ಈಗಾಗಲೇ ಸಿಬಿಐ ಸಹ ತನಿಖೆ ನಡೆಸಿದೆ. ಇದರ ಬೆನ್ನಲ್ಲೇ ಏಕಾಏಕಿ ಇಡಿ ಅಧಿಕಾರಿಗಳು ಬುಧವಾರ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಮತ್ತು ಬಸನಗೌಡ ದದ್ದಲ್ ನಿವಾಸಗಳ ಮೇಲೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಬುಧವಾರ ಬೆಳ್ಳಂಬೆಳಗ್ಗೆ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಹಾಗೂ ಬಳ್ಳಾರಿ ಗ್ರಾಮೀಣ ಶಾಸಕರಾದ ನಾಗೇಂದ್ರ ನಿವಾಸದ ಮೇಲೆ ಈಟಿ ಅಧಿಕಾರಿಗಳು ದಾಳಿ ಮಾಡಿದ್ದು, ಬಳಿಕ ಇಡಿ ಅಧಿಕಾರಿಗಳು ಬೆಂಗಳೂರಿನಲ್ಲಿ ನಾಗೇಂದ್ರ ಆಪ್ತ ಸಹಾಯ ಹರೀಶ್ ಎಂಬುವರನ್ನು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು. ಈ ವೇಳೆ ಹರೀಶ್ ನೀಡಿದ ಕೆಲ ಮಾಹಿತಿ ಆಧಾರದ ಮೇಲೆ ಶಾಸಕ ನಾಗೇಂದ್ರನ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande