ವಾಷಿಂಗ್ಟನ್ ಡಿಸಿ, 18 ಜುಲೈ (ಹಿ.ಸ.) :
ಆ್ಯಂಕರ್ : ಅಮೆರಿಕದ ಅಧ್ಯಕ್ಷ ಜೋ ಬೈಡನ್ಗೆ ಕೊರೊನಾ ಸೋಂಕು ತಗುಲಿದೆ ಎಂದು ಶ್ವೇತ ಭವನ ಮಾಹಿತಿ ನೀಡಿದೆ.
ಬೈಡನ್ಗೆ ಕೊರೊನಾದ ಸೌಮ್ಯ ಲಕ್ಷಣಗಳು ಕಂಡುಬಂದಿವೆ. ಅವರು ಪ್ರತ್ಯೇಕವಾಗಿರಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
81 ವರ್ಷದ ಜೋ ಬೈಡನ್ಗೆ ಜುಲೈ 17ರಂದು ಕೊರೊನಾ ಸೋಂಕು ದೃಢಪಟ್ಟಿದೆ. ಇದಕ್ಕೂ ಒಂದು ದಿನದ ಮೊದಲು ಅವರು ಲಾಸ್ವೇಗಾಸ್ನಲ್ಲಿ ನಡೆದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಿದ್ದರು. ಅಂದು ತಮ್ಮ ಎದುರಾಳಿ ಡೊನಾಲ್ಡ್ ಟ್ರಂಪ್ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಟ್ರಂಪ್ ಅಧಿಕಾರಾವಧಿಯಲ್ಲಿ ಮಾಡಿದ ನೀತಿಗಳು ಮತ್ತು ದೇಶದಲ್ಲಿ ಹೆಚ್ಚುತ್ತಿರುವ ಬಂದೂಕು ಹಿಂಸಾಚಾರವನ್ನು ಅವರು ಖಂಡಿಸಿದರು. ಬೈಡನ್ ಎಲ್ಲಾ ಲಸಿಕೆಗಳನ್ನು ಹಾಕಿಸಿಕೊಂಡಿದ್ದರು, ಬೂಸ್ಟರ್ ಡೋಸ್ಗಳನ್ನು ಕೂಡ ಪಡೆದಿದ್ದರು, ಕಳೆದ ಸೆಪ್ಟೆಂಬರ್ನಲ್ಲಿ ಬೂಸ್ಟರ್ ಡೋಸ್ ನೀಡಲಾಗಿತ್ತು. ಇದಾದ ಬಳಿಕವೂ ಅವರಿಗೆ ಕೊರೊನಾ ಸೋಂಕು ತಗುಲಿದೆ.
ಜೋ ಬಿಡೆನ್ ಅವರು ಜುಲೈ 2022 ರಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಆಗ ಕ್ರಮೇಣವಾಗಿ ಒಂದೊಂದೇ ಕೋವಿಡ್ ಲಕ್ಷಣಗಳು ಕಂಡುಬಂದವು, ನಂತರ ಅವನು ಎರಡನೇ ಬಾರಿಗೆ ತನ್ನನ್ನು ತಾನೇ ಪ್ರತ್ಯೇಕಿಸಿಕೊಳ್ಳಬೇಕಾಯಿತು.
ಅಮೆರಿಕದ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (ಸಿಡಿಸಿ) ಪ್ರಕಾರ, ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚಿನ ಮಾಹಿತಿಯು ಜುಲೈ 6 ಕ್ಕೆ ಕೊನೆಗೊಂಡ ವಾರದಲ್ಲಿ, ಹಿಂದಿನ ವಾರಕ್ಕೆ ಹೋಲಿಸಿದರೆ 23.5 ಪ್ರತಿಶತದಷ್ಟು ಕೋವಿಡ್ ಪ್ರಕರಣಗಳು ವರದಿಯಾಗಿದೆ.
ಈ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಡೊನಾಲ್ಡ್ ಟ್ರಂಪ್ ಹಾಗೂ ಜೋ ಬೈಡನ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ.
ಹಿಂದೂಸ್ತಾನ್ ಸಮಾಚಾರ್
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ