ಚೆನ್ನೈ , 18 ಜುಲೈ (ಹಿ.ಸ.) :
ಆ್ಯಂಕರ್ : ಕಾರ್ತಿ ನಟನೆಯ ‘ಸರ್ದಾರ್ 2’ ಸಿನಿಮಾದ ಸೆಟ್ನಲ್ಲಿ ಅವಘಡ ಸಂಭವಿಸಿದೆ. ಚಿತ್ರೀಕರಣದ ವೇಳೆ ಸಾಹಸಗಾರ ಸಾವನ್ನಪ್ಪಿದ ಘಟನೆ ನಡೆದಿದೆ.
ಎಝುಮಲೈ ಎಂಬ ಸಾಹಸಗಾರ ಸಾಹಸ ಸೀಕ್ವೆನ್ಸ್ ಚಿತ್ರೀಕರಣದ ವೇಳೆ 20 ಅಡಿ ಎತ್ತರದಿಂದ ಬಿದ್ದು ಸಾವನ್ನಪ್ಪಿದ್ದಾರೆ.
ಮಾಹಿತಿಗಳ ಪ್ರಕಾರ,ಸಾಹಸಗಾರ ಎಝುಮಲೈ 20 ಅಡಿ ಎತ್ತರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಎದೆಯ ಬಳಿ ತೀವ್ರವಾದ ಗಾಯವಾಗಿತ್ತು. ಶ್ವಾಸಕೋಶದಲ್ಲಿ ರಕ್ತಸ್ರಾವ ಉಂಟಾಗಿತ್ತು. ಪರಿಣಾಮ ಸಾಹಸಗಾರ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಕೂಡಲೇ ಎಝುಮಲೈ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗಿಲ್ಲ. ಈ ಘಟನೆ ಬೆನ್ನಲ್ಲೇ ‘ಸರ್ದಾರ್ 2’ ಸಿನಿಮಾ ಚಿತ್ರೀಕರಣ ನಿಲ್ಲಿಸಲಾಗಿದೆ.
‘ಸರ್ದಾರ್ 2’ ಸಿನಿಮಾ ಸಾಹಸ ಥ್ರಿಲ್ಲರ್ ಸಿನಿಮಾವಾಗಿದೆ. ಇದು ‘ಸರ್ದಾರ್’ ಸಿನಿಮಾದ ಮುಂದುವರಿದ ಭಾಗವಾಗಿದೆ. ಈ ಸಿನಿಮಾವನ್ನು ಪಿ ಎಸ್ ಮಿತ್ರನ್ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಎಸ್ ಜೆ ಸೂರ್ಯ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ