ಜಾನ್ವಿ ಕಪೂರ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು
ಮುಂಬೈ, 19 ಜುಲೈ (ಹಿ.ಸ.) : ಆ್ಯಂಕರ್ : ಬಾಲಿವುಡ್ ಬೆಡಗಿ ಜಾನ್ವಿ ಕಪೂರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಂತ್ ಅಂಬಾನಿ, ರಾಧಿಕಾ ಮದುವೆಯ ಬಳಿಕ ಜಾನ್ವಿ ಕಪೂರ್ ಚೆನ್ನೈಗೆ ತೆರಳಿದರು. ಅಲ್ಲಿನ ಕುಟುಂಬಸ್ಥರ ಮನೆಗೆ ಭೇಟಿ ನೀಡಿದ್ದ ವೇಳೆ ಫುಡ್ ಪಾಯ
devara-actress-janhvi-kapoor-hospitalised-due-to


ಮುಂಬೈ, 19 ಜುಲೈ (ಹಿ.ಸ.) :

ಆ್ಯಂಕರ್ : ಬಾಲಿವುಡ್ ಬೆಡಗಿ ಜಾನ್ವಿ ಕಪೂರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಂತ್ ಅಂಬಾನಿ, ರಾಧಿಕಾ ಮದುವೆಯ ಬಳಿಕ ಜಾನ್ವಿ ಕಪೂರ್ ಚೆನ್ನೈಗೆ ತೆರಳಿದರು. ಅಲ್ಲಿನ ಕುಟುಂಬಸ್ಥರ ಮನೆಗೆ ಭೇಟಿ ನೀಡಿದ್ದ ವೇಳೆ ಫುಡ್ ಪಾಯ್ಸನ್ ಆಗಿದ್ದು, ನಟಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. 3 ದಿನಗಳ ಕಾಲ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ನಟಿ ಬಿಡುಗಡೆ ಆಗಲಿದ್ದಾರೆ.

ಚೆನ್ನೈನಲ್ಲಿ ಸೇವಿಸಿದ ಆಹಾರದಿಂದಲೇ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಲ್ಲಿರುವಾಗಲೇ ನಟಿ ಕುಸಿದು ಬಿದ್ದಿದ್ದರು ಎನ್ನಲಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಕ್ಕೆ ನಟಿ ಚೇತರಿಕೊಂಡಿದ್ದಾರೆ. ಜಾನ್ವಿ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ


 rajesh pande