ಕೊಪ್ಪಳ, 20 ಜುಲೈ (ಹಿ.ಸ.) :
ಆ್ಯಂಕರ್ : ಕೌಶಲ್ಯಾಭಿವೃದ್ಧಿ ಉದ್ಯಮಶೀತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಇವರ ವತಿಯಿಂದ 2024-25ನೇ ಸಾಲಿನಲ್ಲಿ ಸ್ವಂತ ಉದ್ಯೋಗವನ್ನು ಕೈಗೊಳ್ಳಲು ಇಚ್ಚಿಸುವ “ಮಹಿಳೆಯರಿಗಾಗಿ” ಒಂದು ದಿನದ ಉದ್ಯಮಶೀಲತಾ ತಿಳಿವಳಿಕಾ ಕಾರ್ಯಕ್ರಮವನ್ನು ಕುಷ್ಟಗಿಯಲ್ಲಿ ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವ ಆಸಕ್ತರಿಗೆ ಪ್ರೇರೇಪಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು, ಪ್ರೋತ್ಸಾಹ, ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ಧಿ ತರಬೇತಿ ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು. ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬಹುದು.
ಆಸಕ್ತ ಮಹಿಳಾ ಅಭ್ಯರ್ಥಿಗಳು ಜುಲೈ 26 ರೊಳಗಾಗಿ ತಮ್ಮ ಹೆಸರು ನೋಂದಾಯಿಸಬಹುದು. ಭಾಗವಹಿಸುವವರು ಕನಿಷ್ಟ 18 ವರ್ಷಗಳ ವಯಸ್ಸಿನವರಾಗಿರಬೇಕು ಹಾಗೂ ಓದಲು, ಬರೆಯಲು ಬರುತ್ತಿರಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್ ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಆವರಣ, ನಗರಸಭೆ ಎದುರುಗಡೆ, ಕೊಪ್ಪಳ ಇಲ್ಲಿಗೆ ಅಥವಾ ಮೊ:ಸಂ: 6362557332, 7204016012 ಗೆ ಕಚೇರಿಯ ವೇಳೆಯಲ್ಲಿ ಸಂಪರ್ಕಿಸುವಂತೆ ಕೊಪ್ಪಳ ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್ / ಮನೋಹರ ಯಡವಟ್ಟಿ