ಕೊಲಂಬೊ, 20 ಜುಲೈ (ಹಿ.ಸ.) :
ಆ್ಯಂಕರ್ : 2024ರ ಮಹಿಳಾ ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 7 ವಿಕೆಟ್ಗಳ ಗೆಲುವು ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ್ದ ಪಾಕ್, ಟೀಂ ಇಂಡಿಯಾಗೆ 109 ರನ್ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನು ಹತ್ತಿದ್ದ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಟೀಮ್ ಇಂಡಿಯಾ ಕೇವಲ 14.1 ಓವರ್ನಲ್ಲಿ ಗೆಲುವು ದಾಖಲಿಸಿತು.
ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ 108 ರನ್‌ಗಳಿಗೆ ಆಲೌಟ್ ಆಯಿತು. ಟೀಂ ಇಂಡಿಯಾ ಪರ ದೀಪ್ತಿ ಹಾಗೂ ರೇಣುಕಾ ಮಾರಕ ಬೌಲಿಂಗ್ ಮಾಡಿದರು. ದೀಪ್ತಿ 4 ಓವರ್ ಗಳಲ್ಲಿ 20 ರನ್ ನೀಡಿ 3 ವಿಕೆಟ್ ಪಡೆದರು. ರೇಣುಕಾ 4 ಓವರ್ಗಳಲ್ಲಿ 14 ರನ್ ನೀಡಿ 2 ವಿಕೆಟ್ ಪಡೆದರು. ಶ್ರೇಯಾಂಕ ಪಾಟೀಲ್ 3.2 ಓವರ್ ಗಳಲ್ಲಿ ಕೇವಲ 14 ರನ್ ನೀಡಿ 2 ವಿಕೆಟ್ ಪಡೆದರು. ಪೂಜಾ 4 ಓವರ್ಗಳಲ್ಲಿ 31 ರನ್ ನೀಡಿ 2 ವಿಕೆಟ್ ಪಡೆದರು.
109 ರನ್ಗಳ ಗುರಿ ಬೆನ್ನು ಹತ್ತಿದ ಭಾರತ, ಅದ್ಭುತ ಆರಂಭ ಪಡೆಯಿತು. ಶಫಾಲಿ ವರ್ಮಾ 29 ಬಾಲ್ನಲ್ಲಿ 40 ರನ್ಗಳ ಕಾಣಿಕೆ ನೀಡಿದರು. ಸ್ಮೃತಿ ಮಂದಾನ 31 ಬಾಲ್ನಲ್ಲಿ 45 ರನ್ ಚಚ್ಚಿ ತಂಡವನ್ನು ಗೆಲುವಿನ ದಡಕ್ಕೆ ತಂದಿಟ್ಟಿದ್ದರು. ಹೇಮಲತಾ 14 ರನ್ಗಳಿಸಿ ಔಟ್ ಆದರೆ, ಕ್ಯಾಪ್ಟನ್ ಹರ್ಮನ್ ಪ್ರೀತ್ ಕೌರ್ 5 ಹಾಗೂ ಜೆಮಿ 3 ರನ್ಗಳಿಸಿ ತಂಡವನ್ನು ಗೆಲ್ಲಿಸಿಕೊಟ್ಟರು. ಭಾರತ 14.1 ಓವರ್ನಲ್ಲಿ ಮೂರು ವಿಕೆಟ್ ಕಳೆದುಕೊಂಡು ಗೆಲುವು ಬೀರಿತು.
2024ರ ಮಹಿಳಾ ಏಷ್ಯಾ ಕಪ್‌ನಲ್ಲಿ ಟೀಮ್ ಇಂಡಿಯಾ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಆಡಿ ಗೆಲುವು ಸಾಧಿಸಿದೆ. ಎರಡನೇ ಪಂದ್ಯ ಯುಎಇ ವಿರುದ್ಧ ಆಡಲಿದೆ. ಜುಲೈ 23 ರಂದು ಟೀಂ ಇಂಡಿಯಾ ಮತ್ತು ನೇಪಾಳ ನಡುವೆ ಪಂದ್ಯ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ