ನವದೆಹಲಿ, 21 ಜುಲೈ (ಹಿ.ಸ.) :
ಆ್ಯಂಕರ್ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಲೋಕಸಭೆಯಲ್ಲಿ ಆರ್ಥಿಕ ಸಮೀಕ್ಷಯ ವರದಿಯನ್ನು ಮಂಡಿಸಲಿದ್ದಾರೆ. ಸಮೀಕ್ಷೆಯಲ್ಲಿ ದೇಶದ ಆರ್ಥಿಕ ಬೆಳವಣಿಗೆ ನೀತಿ-ನಿರೂಪಣೆ ಅನುಷ್ಠಾನ ಹಾಗೂ ಸಾಮಾಜಿಕ, ಆರೋಗ್ಯ ಸೇರಿದಂತೆ ಹಲವು ವಲಯಗಳ ವಿವರಗಳು ಲಭ್ಯವಿರಲಿದೆ ಎಂದು ಮುಖ್ಯ ಆರ್ಥಿಕ ಸಲಹೆಗಾರ ವಿ.ಅನಂತ ನಾಗೇಶ್ವರನ್ ತಿಳಿಸಿದ್ದಾರೆ.
೨೦೨೫ರ ಆರ್ಥಿಕ ವರ್ಷದಲ್ಲಿ ದೇಶದ ಆರ್ಥಿಕ ಬೆಳವಣೆಗೆ ಶೇಕಡ ೭ ರ ಗುರಿ ತಲುಪಲಿದೆ ಎಂದು ಅವರು ವಿಶ್ಲೇಷಿಸಿದ್ದಾರೆ. ಆಯ-ವ್ಯಯದ ಸಂಪೂರ್ಣ ವರದಿ, ಬೆಳವಣಿಗೆ, ಸಮೀಕ್ಷಾ ವಿವರಗಳು ವರದಿಯಲ್ಲಿ ಉಲ್ಲೇಖಿಸಲಾಗುವುದು. ೨೦೨೩ ರಲ್ಲಿ ಐಎಂಎಫ್ ಮಂಡಿಸಿದ್ದ ಮಾಹಿತಿಯಂತೆ ದೇಶದ ಆರ್ಥಿಕ ಬೆಳವಣಿಗೆ ಶೇಕಡ ೭ರ ಆಸುಪಾಸಿನಲ್ಲಿ ಇರಲಿದೆ ಎಂದು ಉಲ್ಲೇಖಿಸಲಾಗಿತ್ತು.
ಹಿಂದೂಸ್ತಾನ್ ಸಮಾಚಾರ್
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ