ಬೆಂಗಳೂರು, 21 ಜುಲೈ (ಹಿ.ಸ.) :
ಆ್ಯಂಕರ್ : ಹಡಪದ ಸಮಾಜದ ಅಭಿವೃದ್ಧಿಗೆ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದು, ಅವುಗಳ ಸಮರ್ಪಕ ಅನುಷ್ಠಾನಕ್ಕೆ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಡಪದ ಸಮಾಜದ ಏಳಿಗೆಗೆ ಸರ್ಕಾರ ಬದ್ಧವಾಗಿದ್ದು, ಈ ಸಮಾಜದ ಮಕ್ಕಳು ಜಾತಿಯ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸುವಾಗ ಎದುರಾಗುತ್ತಿರುವ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಕರ್ನಾಟಕ ನಾಮಕರಣದ ಸುವರ್ಣ ಸಂದರ್ಭಕ್ಕಾಗಿ ನವೆಂಬರ್ ತಿಂಗಳೊಳಗೆ ನಾಲ್ಕು ವಿಶೇಷ ಕಾರ್ಯಕ್ರಮಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರೂಪಿಸಲಾಗುತ್ತಿದೆ. ರಾಯಚೂರಿನಲ್ಲಿ ಗೋಕಾಕ್ ಚಳುವಳಿಯ ಹಿನ್ನೋಟ -ಮುನ್ನೋಟ ಎಂಬ ರಾಜ್ಯಮಟ್ಟದ ಸಮಾವೇಶ, ಜತ್ತ ತಾಲೂಕಿನಲ್ಲಿ ಗಡಿಭಾಗದ ಸಾಂಸ್ಕೃತಿಕ ಸಮಾವೇಶ, ಮೈಸೂರಿನಲ್ಲಿ ಸಾಹಿತಿ ,ಚಿಂತಕರ ಸಮಾವೇಶ ಹಾಗೂ ಬೆಂಗಳೂರಿನಲ್ಲಿ ಸುವರ್ಣ ಸಂಭ್ರಮ-೫೦ ಎಂಬ ವಿಶೇಷ ಕಾರ್ಯಕ್ರಮಗಳು ಆಯೋಜನೆ ಯಾಗುತ್ತಿವೆ. ಇವು ಕರ್ನಾಟಕ ನಾಮಕರಣದ ಸುವರ್ಣ ಸಂಭ್ರಮದ ಮೆರಗನ್ನು ಹೆಚ್ಚಿಸಲಿವೆ ಎಂದು ಅವರು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ