ಹೊಸಪೇಟೆ , 21 ಜುಲೈ (ಹಿ.ಸ.) :
ಆ್ಯಂಕರ್ : ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಚೇರಿ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆ, ಹೊಸಪೇಟೆ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಲ್ಲಿಗೆ ಪ್ಯಾರಮೆಡಿಕಲ್ ಕಾಲೇಜ್ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಮೆದುಳು ದಿನಾಚರಣೆ ಅಂಗವಾಗಿ ಜುಲೈ 22ರಂದು ಬೆಳ್ಳಿಗೆ 9 ಗಂಟೆಗೆ ಮಾರ್ಕಂಡೇಶ್ವ ದೇವಸ್ಥಾನದಿದಂದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯವರೆಗೆ ಜನಜಾಗೃತಿ ಜಾಥಾ ಮತ್ತು ಆಸ್ಪತ್ರೆಯಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಶಂಕರ್ ನಾಯ್ಕ ಎಲ್.ಆರ್. ಅವರು ಜಾಥಾ ಮತ್ತು ಉದ್ಘಾಟನೆ ನೆರವೇರಿಸುವರು. ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ.ಎನ್.ಸಲೀಂ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕುಷ್ಠರೋಗ ನಿರ್ಮಾಲನಾಧಿಕಾರಿ ಡಾ.ರಾಧಿಕಾ.ಕೆ ಪ್ರಾಸ್ತ್ತಾವಿಕ ಮಾತನಾಡುವರು.
ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಫಿಜಿಷಿಯನ್ ಡಾ.ಸೋಮಶೇಖರ ಕೆ ವಿಶೇಷ ಉಪನ್ಯಾಸ ನೀಡುವರು. ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಕಮಲಮ್ಮ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ವಿನಯ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಜಗದೀಶ ಪಾಟ್ಟೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ ನಾಯ್ಕ, ತಾಲೂಕು ಆರೋಗ್ಯಾಧಿಕಾರಿ ಡಾ.ಭಾಸ್ಕರ್.ಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ದೊಡ್ಡಮನಿ ಎಂ.ಪಿ, ಜಿಲ್ಲಾ ಸಂಯೋಜಕರು ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದ ಗಿರೀಶ್ ಆರ್ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಹಿಂದೂಸ್ತಾನ್ ಸಮಾಚಾರ್
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್ / ಮನೋಹರ ಯಡವಟ್ಟಿ