ಸಮಸ್ಯೆ ಕೇಳಲು ಬಂದ ಸಚಿವ ಬೋಸರಾಜುಗೆ ಸಂತ್ರಸ್ತರಿಂದ ತರಾಟೆ
ಮಡಿಕೇರಿ, 21 ಜುಲೈ (ಹಿ.ಸ.) : ಆ್ಯಂಕರ್ : ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿದ್ದ ಸಚಿವ ಬೋಸರಾಜು ಅವರನ್ನು ಸಂತ್ರಸ್ತ ಜನರು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ಸೋಮವಾರಪೇಟೆ ತಾಲ್ಲೂಕಿನ ಜಂಬೂರಿಗೆ ಸಚಿವ ಬೋಸರಾಜು ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಮ
flood-affected-people-angry-with-minister-n-s-boseraju


ಮಡಿಕೇರಿ, 21 ಜುಲೈ (ಹಿ.ಸ.) :

ಆ್ಯಂಕರ್ : ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿದ್ದ ಸಚಿವ ಬೋಸರಾಜು ಅವರನ್ನು ಸಂತ್ರಸ್ತ ಜನರು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

ಸೋಮವಾರಪೇಟೆ ತಾಲ್ಲೂಕಿನ ಜಂಬೂರಿಗೆ ಸಚಿವ ಬೋಸರಾಜು ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಮಂಥರ್ ಗೌಡ ಭೇಟಿ ನೀಡಿದ್ದರು. ಮಳೆಯಿಂದ ಹಾನಿಗೊಳಗಾಗಿರುವ ಸ್ಥಳಗಳಿಗೆ ತೆರಳಿ ವೀಕ್ಷಣೆ ಮಾಡಿದರು.

2018 ರಲ್ಲಿ ಮಹಾ ಮಳೆಯಿಂದ ಆಸ್ತಿಪಾಸ್ತಿ, ಮನೆಗಳನ್ನು ಕಳೆದುಕೊಂಡ ನಮಗೆ ಸರ್ಕಾರ ಮನೆ ನೀಡಿದೆ. ಅದರೆ ಯಾವುದೇ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕೊಡದೇ ಏಕಾಏಕಿ ಮನೆಗಳಿಗೆ ಕಳಿಸಿದೆ. ಇವತ್ತು ಇಲ್ಲಿಗೆ ಬಂದು ನೆಮ್ಮದಿಯನ್ನು ಕಳೆದುಕೊಂಡಿದ್ದೀವಿ. ಹಲವಾರು ಬಾರಿ ಶಾಸಕರು, ಜಿಲ್ಲಾಧಿಕಾರಿಗಳಿಗೆ ಇಲ್ಲಿನ ಸಮಸ್ಯೆಯ ಬಗ್ಗೆ ಮನವರಿಕೆ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಂತ್ರಸ್ತರು ತರಾಟೆಗೆ ತೆಗೆದುಕೊಂಡರು.

ಕುಡಿಯುವ ನೀರಿಲ್ಲ. ವಿದ್ಯುತ್ ಸರಿಯಾಗಿ ಪೂರೈಕೆ ಇಲ್ಲ. ಚರಂಡಿ ವ್ಯವಸ್ಥೆಗಳಿಲ್ಲ.ಶಾಸಕರಿಗೆ, ಜಿಲ್ಲಾಧಿಕಾರಿ ಯಾರಿಗೆ ಹೇಳಿದರೂ ಪ್ರಯೋಜನವಾಗಿಲ್ಲ. ನಮ್ಮ ಸಮಸ್ಯೆ ಯಾರು ಬಗೆಹರಿಸುತ್ತಿಲ್ಲವೆಂದು ಸಚಿವರ ಮುಂದೆ ನೂರಾರು ಜನರು ಆಕ್ರೋಶ ಹೊರಹಾಕಿದರು.

ಹಿಂದೂಸ್ತಾನ್ ಸಮಾಚಾರ್

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ


 rajesh pande