ಭಾರತ ಮೂಲದ ಕಮಲಾ ಹ್ಯಾರಿಸ್‌ ಅಮೆರಿಕ ಅಧ್ಯಕ್ಷೀಯ ಚುನಾವಣೆ ಅಭ್ಯರ್ಥಿ
ವಾಷಿಂಗ್ಟನ್ , 22 ಜುಲೈ (ಹಿ.ಸ.) : ಆ್ಯಂಕರ್ : ಜೋ ಬೈಡೆನ್‌ ಯುಎಸ್‌ ಅಧ್ಯಕ್ಷೀಯ ಚುನಾವಣೆಯಿಂದ ಹೊರಗುಳಿದಿದ್ದಾರೆ. ಡೆಮಾಕ್ರಟಿಕ್‌ ಪಕ್ಷದ ಹೊಸ ಅಭ್ಯರ್ಥಿಯಾಗಿ ಉಪಾಧ್ಯಕ್ಷೆಯಾಗಿರುವ ಕಮಲಾ ಹ್ಯಾರಿಸ್‌ ಅವರನ್ನು ಅನುಮೋದಿಸಿದ್ದಾರೆ. ಅಧ್ಯಕ್ಷೀಯ ಚುನಾವಣೆಗೆ ಬೈಡೆನ್‌ ಮತ್ತೆ ಸ್ಪರ್ಧಿಸುವ ವಿಚಾರವಾ
biden-drops-out-of-re-election-battle-with-trump-


ವಾಷಿಂಗ್ಟನ್ , 22 ಜುಲೈ (ಹಿ.ಸ.) :

ಆ್ಯಂಕರ್ : ಜೋ ಬೈಡೆನ್‌ ಯುಎಸ್‌ ಅಧ್ಯಕ್ಷೀಯ ಚುನಾವಣೆಯಿಂದ ಹೊರಗುಳಿದಿದ್ದಾರೆ. ಡೆಮಾಕ್ರಟಿಕ್‌ ಪಕ್ಷದ ಹೊಸ ಅಭ್ಯರ್ಥಿಯಾಗಿ ಉಪಾಧ್ಯಕ್ಷೆಯಾಗಿರುವ ಕಮಲಾ ಹ್ಯಾರಿಸ್‌ ಅವರನ್ನು ಅನುಮೋದಿಸಿದ್ದಾರೆ.

ಅಧ್ಯಕ್ಷೀಯ ಚುನಾವಣೆಗೆ ಬೈಡೆನ್‌ ಮತ್ತೆ ಸ್ಪರ್ಧಿಸುವ ವಿಚಾರವಾಗಿ ಅನೇಕ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿವೆ. ಸ್ವತಃ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ ಅವರೇ, ಬೈಡೆನ್‌ ಸ್ಪರ್ಧೆ ಮಾಡುವುದು ಬೇಡ ಎಂಬಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಚರ್ಚೆಗಳ ಮಧ್ಯೆ ವಯಸ್ಸು ಹಾಗೂ ಮಾನಸಿಕ ಸಾಮರ್ಥ್ಯದ ದೃಷ್ಟಿಯಿಂದ ಬೈಡೆನ್‌ ಚುನಾವಣಾ ಕಣದಿಂದ ಹಿಂದೆ ಸರಿದಂತೆ ಕಾಣುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಚುನಾವಣೆ ಹೊತ್ತಲ್ಲಿ ಈ ಅಚ್ಚರಿದಾಯಕ ಬೆಳವಣಿಗೆ ಡೆಮಾಕ್ರಟಿಕ್‌ ಪಕ್ಷದಲ್ಲಿ ಪ್ರಕ್ಷಬ್ದತೆಗೆ ಕಾರಣವಾಗಬಹುದು. ಆದರೆ ಪಕ್ಷವನ್ನು ಪುನಶ್ಚೇತನಗೊಳಿಸಲು ಇದು ಸಹಕಾರಿಯಾಗಬಹುದು. ಪ್ರಬಲ ಪೈಪೋಟಿ ನೀಡುತ್ತಿರುವ ಡೊನಾಲ್ಡ್‌ ಟ್ರಂಪ್‌ ಸೋಲಿಸಿ, ಕಮಲಾ ಹ್ಯಾರಿಸ್‌ ಅವರನ್ನು ಅಮೆರಿಕದ ಮೊದಲ ಮಹಿಳಾ ಅಧ್ಯಕ್ಷರನ್ನಾಗಿ ಮಾಡುವ ಗುರಿಯೊಂದಿಗೆ ಪಕ್ಷ ಮುನ್ನಡೆಯಲು ಬೂಸ್ಟ್‌ ಕೊಡಬಹುದು ಎನ್ನಲಾಗಿದೆ.

ಚುನಾವಣಾ ಪ್ರಚಾರ ರ‍್ಯಾಲಿಗಳಲ್ಲಿ ಬೈಡೆನ್‌ ಅವರನ್ನೇ ಗುರಿಯಾಗಿಸಿ ಟ್ರಂಪ್‌ ಮಾತನಾಡುತ್ತಿದ್ದರು. ಬೈಡೆನ್‌ ಮತ್ತೆ ಅಧ್ಯಕ್ಷರಾಗಲು ಯೋಗ್ಯರಲ್ಲ. ಅವರು ಸೇವೆ ಮಾಡಲು ಯೋಗ್ಯರಲ್ಲ ಎಂಬ ಮಾತುಗಳನ್ನಾಡಿದ್ದರು.

ಹಿಂದೂಸ್ತಾನ್ ಸಮಾಚಾರ್

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ


 rajesh pande