ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ದ್ರಾವಿಡ್ ಕೋಚ್
ನವದೆಹಲಿ, 23 ಜುಲೈ (ಹಿ.ಸ.) : ಆ್ಯಂಕರ್ : ಟೀಮ್ ಇಂಡಿಯಾದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗುವ ಸಾಧ್ಯತೆಯಿದೆ. ಈ ಬಗ್ಗೆ ಆರ್ ​ಆರ್ ಫ್ರಾಂಚೈಸಿ ಹಾಗೂ ದ್ರಾವಿಡ್ ನಡುವೆ ಮಾತುಕತೆ ನಡೆದಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ಪ್ರಕಟವಾಗಲಿದೆ. ರಾಜಸ
Rahul Dravid In Talks To Become Rajasthan


ನವದೆಹಲಿ, 23 ಜುಲೈ (ಹಿ.ಸ.) :

ಆ್ಯಂಕರ್ : ಟೀಮ್ ಇಂಡಿಯಾದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗುವ ಸಾಧ್ಯತೆಯಿದೆ. ಈ ಬಗ್ಗೆ ಆರ್ ​ಆರ್ ಫ್ರಾಂಚೈಸಿ ಹಾಗೂ ದ್ರಾವಿಡ್ ನಡುವೆ ಮಾತುಕತೆ ನಡೆದಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ಪ್ರಕಟವಾಗಲಿದೆ.

ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ರಾಹುಲ್ ದ್ರಾವಿಡ್ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಿಕೊಳ್ಳಲು ಆಸಕ್ತಿ ಹೊಂದಿದೆ. ಈ ಬಗ್ಗೆ ಮಾತುಕತೆಯನ್ನು ಸಹ ನಡೆಸಿದ್ದಾರೆ. ಈ ಮಾತುಕತೆಯು ಅಂತಿಮ ಹಂತದಲ್ಲಿದ್ದು, ದ್ರಾವಿಡ್ ಕಡೆಯಿಂದ ಹಸಿರು ನಿಶಾನೆ​ಗಾಗಿ ಆರ್ ​ಆರ್ ಫ್ರಾಂಚೈಸಿ ಕಾಯುತ್ತಿದೆ. ಹೀಗಾಗಿ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಲಿದ್ದಾರಾ ಎಂಬುದರ ಸ್ಪಷ್ಟ ಮಾಹಿತಿ ಕೆಲವೇ ದಿನಗಳಲ್ಲಿ ಹೊರಬೀಳುವ ಸಾಧ್ಯತೆಯಿದೆ.

ಹಿಂದೂಸ್ತಾನ್ ಸಮಾಚಾರ್

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ


 rajesh pande