ನಟ ದರ್ಶನ್‌ಗೆ ಮನೆ ಊಟ ನೀಡಲು ನಿರಾಕರಿಸಿದ ನ್ಯಾಯಾಲಯ
ಬೆಂಗಳೂರು, 25 ಜುಲೈ (ಹಿ.ಸ.) : ಆ್ಯಂಕರ್ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ವಶದಲ್ಲಿರುವ ಚಿತ್ರನಟ ದರ್ಶನ್‌ಗೆ ಮನೆ ಊಟ ನೀಡಲು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ನಿರಾಕರಿಸಿದೆ. ಮನೆ ಊಟ, ಹಾಸಿಗೆ, ದಿಂಬು, ಪುಸ್ತಕಗಳನ್ನು ನೀಡಬೇಕೆಂದು ಸಲ್ಲಿಸಿದ್ದ ಅರ್ಜಿ ವ
court-refused-to-give-home-meal-to


ಬೆಂಗಳೂರು, 25 ಜುಲೈ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ವಶದಲ್ಲಿರುವ ಚಿತ್ರನಟ ದರ್ಶನ್‌ಗೆ ಮನೆ ಊಟ ನೀಡಲು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ನಿರಾಕರಿಸಿದೆ.

ಮನೆ ಊಟ, ಹಾಸಿಗೆ, ದಿಂಬು, ಪುಸ್ತಕಗಳನ್ನು ನೀಡಬೇಕೆಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ದರ್ಶನ್‌ ಮನವಿಯನ್ನು ವಜಾಗೊಳಿಸಿದೆ.

ಇದರಿಂದ ನಟ ದರ್ಶನ್‌ ಜೈಲೂಟವನ್ನೇ ಮಾಡಬೇಕಾಗಿದೆ. ಯಾವುದೇ ಸೌಲಭ್ಯಗಳು ಸಿಗುವುದಿಲ್ಲ. ಸಾಮಾನ್ಯ ಕೈದಿಗಳಂತೆ ಜೈಲೂಟವನ್ನೇ ಸವಿಯಬೇಕಾಗಿದೆ. ದರ್ಶನ್‌ ಮನೆ ಊಟದ ಬೇಡಿಕೆಯನ್ನು ನ್ಯಾಯಾಲಯ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯಾಕ್ಕೆ ದರ್ಶನ್‌ ಪರ ವಕೀಲರು ಮತ್ತೆ ಮನವಿ ಸಲ್ಲಿಸುವ ಸಾಧ್ಯತೆ ಇದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ದರ್ಶನ್‌ಗೆ ಮನೆ ಊಟಕ್ಕೆ ಅನುಮತಿ ನೀಡಬೇಕು ಎಂದು ಈ ಹಿಂದೆ ಉಚ್ಚ ನ್ಯಾಯಾಲಯಾದಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಉಚ್ಚ ನ್ಯಾಯಾಲಯಾಕ್ಕೆ ಸೂಚನೆ ನೀಡಿತ್ತು.

ಉಚ್ಚ ನ್ಯಾಯಾಲಯಾದ ಸೂಚನೆಯಂತೆ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಮ್ಯಾಜಿಸ್ಟ್ರೇಟ್‌ ನ್ಯಾಯಾಲದಲ್ಲಿ ವಿಚಾರಣೆ ನಡೆದು ದರ್ಶನ್‌ನ ಅರ್ಜಿಯನ್ನು ವಜಾಗೊಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ


 rajesh pande