ಕೆಆರ್​ಎಸ್ ಡ್ಯಾಂನಿಂದ ನೀರು ಬಿಡುಗಡೆ, ಪ್ರವಾಹ ಭೀತಿ
ಮೈಸೂರು, 26 ಜುಲೈ (ಹಿ.ಸ.) : ಆ್ಯಂಕರ್ :ಕಾವೇರಿ ಜಲನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದೇ ಕಾರಣಕ್ಕೆ ಮಂಡ್ಯ ಜಿಲ್ಲೆಯ ಕೆಆರ್​ಎಸ್ ಜಲಾಶಯ ಮೈತುಂಬಿ ನಿಂತಿದೆ. ಹೀಗಾಗಿ ಬರೋಬ್ಬರಿ 90 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ. ನದಿ ಪಾತ್ರದ ಕಬ್ಬು, ತೆಂಗು, ಅಡಿಕೆ ಸೇರಿದಂತೆ
ಕೆಆರ್​ಎಸ್ ಡ್ಯಾಂನಿಂದ ನೀರು ಬಿಡುಗಡೆ, ಪ್ರವಾಹ ಭೀತಿ


ಮೈಸೂರು, 26 ಜುಲೈ (ಹಿ.ಸ.) :

ಆ್ಯಂಕರ್ :ಕಾವೇರಿ ಜಲನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದೇ ಕಾರಣಕ್ಕೆ ಮಂಡ್ಯ ಜಿಲ್ಲೆಯ ಕೆಆರ್​ಎಸ್ ಜಲಾಶಯ ಮೈತುಂಬಿ ನಿಂತಿದೆ. ಹೀಗಾಗಿ ಬರೋಬ್ಬರಿ 90 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ. ನದಿ ಪಾತ್ರದ ಕಬ್ಬು, ತೆಂಗು, ಅಡಿಕೆ ಸೇರಿದಂತೆ ಹಲವು ಬೆಳೆಗಳು ಮುಳುಗಿ ಹೋಗಿದ್ದು, ಪ್ರವಾಹ ಭೀತಿ ಮತ್ತಷ್ಟು ಹೆಚ್ಚಾಗಿದೆ.

ಶ್ರೀರಂಗಪಟ್ಟಣದ ಗಂಜಾಂನಲ್ಲಿರುವ ಪ್ರಸಿದ್ಧ ನಿಮಿಷಾಂಬ ದೇಗುಲಕ್ಕೂ ಮಳೆ ಅಬ್ಬರದ ಬಿಸಿ ತಟ್ಟಿದೆ. ಕಾವೇರಿ ನದಿ ಬೋರ್ಗರೆತಕ್ಕೆ ಈಗಾಗಲೇ ದೇಗುಲದ ಸ್ನಾನಘಟ್ಟ ಮುಳುಗಿ ಹೋಗಿದೆ. ಮುಂಜಾಗೃತ ಕ್ರಮವಾಗಿ ಭಕ್ತರು ನದಿಗೆ ಇಳಿಯದಂತೆ ನಿರ್ಬಂಧ ವಿಧಿಸಲಾಗಿದೆ. ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ.

ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮಕ್ಕೆ ಜಲ ದಿಗ್ಬಂದನವಾಗಿದೆ. ಇಲ್ಲಿರುವ ಅರಣ್ಯ ಇಲಾಖೆ ಕಚೇರಿ ಕೂಡ ಜಲಾವೃತವಾಗಿದೆ. ಸದ್ಯ ಪ್ರವಾಸಿಗರ ಭೇಟಿ ಮತ್ತೆ ಬೋಟಿಂಗ್ ಎರಡಕ್ಕೂ ನಿರ್ಬಂಧ ವಿಧಿಸಲಾಗಿದೆ.ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 50,000 ರಿಂದ 80,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ. ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ ಎಂದು ಕಾವೇರಿ ನೀರು ನಿಗಮ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande