ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ
ಬೆಂಗಳೂರು, 26 ಜುಲೈ (ಹಿ.ಸ.) : ಆ್ಯಂಕರ್ : ಚಿನ್ನ, ಬೆಳ್ಳಿ ಬೆಲೆ ಇಂದೂ ಕೂಡ ಭಾರೀ ಇಳಿಕೆಯಾಗಿದೆ. ಭಾರತದಲ್ಲಿ ಮಾತ್ರವೇ ಈ ಪರಿ ಇಳಿಕೆ ಆಗಿರುವುದು. ವಿದೇಶಗಳಲ್ಲಿ ಚಿನ್ನದ ಬೆಲೆಯಲ್ಲಿ ಅಷ್ಟೇನೂ ವ್ಯತ್ಯಯವಾಗಿಲ್ಲ. ಬಜೆಟ್​ನಲ್ಲಿ ಚಿನ್ನ, ಬೆಳ್ಳಿ, ಪ್ಲಾಟಿನಂ ಮೇಲೆ ಆಮದು ಸುಂಕ ಇಳಿಸಿರುವ ಹಿನ್ನೆಲೆಯ
Gold Price Today On 12th July 2024, Gold And Silver Rat


ಬೆಂಗಳೂರು, 26 ಜುಲೈ (ಹಿ.ಸ.) :

ಆ್ಯಂಕರ್ : ಚಿನ್ನ, ಬೆಳ್ಳಿ ಬೆಲೆ ಇಂದೂ ಕೂಡ ಭಾರೀ ಇಳಿಕೆಯಾಗಿದೆ. ಭಾರತದಲ್ಲಿ ಮಾತ್ರವೇ ಈ ಪರಿ ಇಳಿಕೆ ಆಗಿರುವುದು. ವಿದೇಶಗಳಲ್ಲಿ ಚಿನ್ನದ ಬೆಲೆಯಲ್ಲಿ ಅಷ್ಟೇನೂ ವ್ಯತ್ಯಯವಾಗಿಲ್ಲ. ಬಜೆಟ್​ನಲ್ಲಿ ಚಿನ್ನ, ಬೆಳ್ಳಿ, ಪ್ಲಾಟಿನಂ ಮೇಲೆ ಆಮದು ಸುಂಕ ಇಳಿಸಿರುವ ಹಿನ್ನೆಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ಬೆಲೆ ಸತತವಾಗಿ ಕುಸಿಯುತ್ತಿದೆ. ಭಾರತದಲ್ಲಿ ಆಭರಣ ಚಿನ್ನ ಗ್ರಾಮ್​ಗೆ 6,400 ರೂಗೆ ಇಳಿದಿದೆ. ಸೌದಿಯಲ್ಲಿ ಚಿನ್ನದ ಬೆಲೆ ಹತ್ತಿರಹತ್ತಿರ 6,200 ರೂನಷ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 69,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 64,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,450 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 26ಕ್ಕೆ)

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,000 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,820 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 887.50 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,000 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,820 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 875 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

ಬೆಂಗಳೂರು: 64,000 ರೂ

ಚೆನ್ನೈ: 64,300 ರೂ

ಮುಂಬೈ: 64,000 ರೂ

ದೆಹಲಿ: 64,150 ರೂ

ಕೋಲ್ಕತಾ: 64,000 ರೂ

ಕೇರಳ: 64,000 ರೂ

ಅಹ್ಮದಾಬಾದ್: 64,050 ರೂ

ಜೈಪುರ್: 64,150 ರೂ

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ


 rajesh pande