ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ನವದೆಹಲಿ, 26 ಜುಲೈ (ಹಿ.ಸ.) : ಆ್ಯಂಕರ್ : ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಕರ್ತವ್ಯ ನಿರ್ವಹಿಸುವ ವೇಳೆ ಬಲಿದಾನಗೈದ ಸೈನಿಕರಿಗೆ ಪ್ರಧಾನಿ ಗೌರವ ಸಮರ್ಪಣೆ ಮಾಡಲಿದ್ದಾರೆ. ಇದೇ ವೇಳೆ ಪ್ರಧಾನಮಂತ್ರಿ ಶಿಂಕುನ್ ಲಾ ಸುರಂಗ
PM


ನವದೆಹಲಿ, 26 ಜುಲೈ (ಹಿ.ಸ.) :

ಆ್ಯಂಕರ್ : ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಕರ್ತವ್ಯ ನಿರ್ವಹಿಸುವ ವೇಳೆ ಬಲಿದಾನಗೈದ ಸೈನಿಕರಿಗೆ ಪ್ರಧಾನಿ ಗೌರವ ಸಮರ್ಪಣೆ ಮಾಡಲಿದ್ದಾರೆ.

ಇದೇ ವೇಳೆ ಪ್ರಧಾನಮಂತ್ರಿ ಶಿಂಕುನ್ ಲಾ ಸುರಂಗ ಮಾರ್ಗ ಯೋಜನೆಗೆ ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ.

ಲೇಹ್‌ಗೆ ನಿಮು-ಪದುಮ್-ಡಾರ್ಚಾ ರಸ್ತೆಯಿಂದ ಎಲ್ಲಾ ಹವಾಮಾನಗಳಲ್ಲೂ ಸಂಪರ್ಕ ಕಲ್ಪಿಸಲು ಸುಮಾರು ೧೫ ಸಾವಿರದ ೮೦೦ ಅಡಿ ಎತ್ತರದಲ್ಲಿ ೪.೧ ಕಿಲೋಮೀಟರ್ ಉದ್ದದ ಜೋಡಿ ಸುರಂಗ ಮಾರ್ಗವನ್ನು ನಿರ್ಮಿಸಲಾಗುವುದು. ಈ ಕಾರ್ಯ ಪೂರ್ಣಗೊಂಡ ನಂತರ ವಿಶ್ವದಲ್ಲೇ ಇದು ಅತಿ ಎತ್ತರದ ಸುರಂಗಮಾರ್ಗವಾಗಲಿದ್ದು, ಶಸ್ತ್ರಾಸ್ತ್ರ ಪಡೆ ಹಾಗೂ ಸಶಸ್ತ್ರ ಪಡೆಗಳ ಸುಗಮ ಪ್ರಯಾಣಕ್ಕಷ್ಟೇ ಅಲ್ಲದೆ, ಲಡಾಕ್‌ನಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೂ ಸಹಾಯಕವಾಗಲಿದೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ


 rajesh pande