ಮಹಿಳಾ ಏಷ್ಯಾಕಪ್, ಭಾರತ- ಬಾಂಗ್ಲಾದೇಶ ಮುಖಾಮುಖಿ
ಕೊಲಂಬೊ , 26 ಜುಲೈ (ಹಿ.ಸ.) : ಆ್ಯಂಕರ್ : 2024 ರ ಮಹಿಳಾ ಏಷ್ಯಾಕಪ್‌ನ ಮೊದಲ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ.ಭಾರತ ಮತ್ತು ಬಾಂಗ್ಲಾದೇಶ ಮಹಿಳಾ ತಂಡಗಳ ನಡುವಿನ ಮೊದಲ ಸೆಮಿಫೈನಲ್ ಪಂದ್ಯ ಇಂದು ನಡೆಯಲಿದೆ. ಈ ಟೂರ್ನಿಯ ಹಾಲಿ ಚಾಂಪಿಯನ್ ಆಗಿರುವ ಭಾರತ ತಂಡ ಇದ
Rangiri Dambulla International


ಕೊಲಂಬೊ , 26 ಜುಲೈ (ಹಿ.ಸ.) :

ಆ್ಯಂಕರ್ : 2024 ರ ಮಹಿಳಾ ಏಷ್ಯಾಕಪ್‌ನ ಮೊದಲ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ.ಭಾರತ ಮತ್ತು ಬಾಂಗ್ಲಾದೇಶ ಮಹಿಳಾ ತಂಡಗಳ ನಡುವಿನ ಮೊದಲ ಸೆಮಿಫೈನಲ್ ಪಂದ್ಯ ಇಂದು ನಡೆಯಲಿದೆ.

ಈ ಟೂರ್ನಿಯ ಹಾಲಿ ಚಾಂಪಿಯನ್ ಆಗಿರುವ ಭಾರತ ತಂಡ ಇದುವರೆಗಿನ ಎಲ್ಲಾ ಪಂದ್ಯಗಳನ್ನು ಗೆದ್ದಿದೆ. ಇತ್ತ ಬಾಂಗ್ಲಾದೇಶ, ಶ್ರೀಲಂಕಾ ವಿರುದ್ಧ ಒಂದು ಪಂದ್ಯದಲ್ಲಿ ಸೋತಿದೆ. ಮಹಿಳಾ ಏಷ್ಯಾಕಪ್ ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವೆ ಒಟ್ಟು 4 ಪಂದ್ಯಗಳು ನಡೆದಿದ್ದು, ಉಭಯ ತಂಡಗಳು ತಲಾ ಎರಡೆರಡು ಪಂದ್ಯಗಳನ್ನು ಗೆದ್ದಿವೆ. ಈ ಹಿಂದೆ ಬಾಂಗ್ಲಾದೇಶ 2018ರ ಫೈನಲ್ ಪಂದ್ಯದಲ್ಲಿ ಭಾರತವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಹೀಗಾಗಿ ಉಭಯ ತಂಡಗಳಿಂದ ಸಮಬಲದ ಹೋರಾಟವನ್ನು ನಿರೀಕ್ಷಿಸಬಹುದಾಗಿದೆ.

ಭಾರತ- ಬಾಂಗ್ಲಾದೇಶ ಮುಖಾಮುಖಿ

ಟಿ20ಯಲ್ಲಿ ಉಭಯ ತಂಡಗಳ ನಡುವೆ ಮುಖಾಮುಖಿ ಕುರಿತು ಮಾತನಾಡಿದರೆ ಒಟ್ಟು 13 ಪಂದ್ಯಗಳು ನಡೆದಿವೆ. ಇದರಲ್ಲಿ ಭಾರತ 11 ಪಂದ್ಯಗಳನ್ನು ಗೆದ್ದಿದ್ದರೆ, ಬಾಂಗ್ಲಾದೇಶ 2 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಇನ್ನು ಉಭಯ ತಂಡಗಳ ಇತ್ತೀಚಿನ ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ಭಾರತ ತಂಡ ಇದುವರೆಗೆ ಉತ್ತಮ ಪ್ರದರ್ಶನ ನೀಡಿದೆ. ಆದರೆ, ಬಾಂಗ್ಲಾದೇಶವನ್ನು ಹಗುರವಾಗಿ ಪರಿಗಣಿಸುವ ತಪ್ಪನ್ನು ಭಾರತ ಮಾಡುವಂತಿಲ್ಲ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯವು ದಂಬುಲಾದ ರಂಗಿರಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ


 rajesh pande