ರಾಮನಗರ ಜಿಲ್ಲೆ ‌ಹೆಸರು ಬದಲಾವಣೆ
ಬೆಂಗಳೂರು, 26 ಜುಲೈ (ಹಿ.ಸ.) : ಆ್ಯಂಕರ್ : ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡೋ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಠ ಕೊನೆಗೂ ಗೆದ್ದಿದೆ. ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರು ನಾಮಕರಣ ಮಾಡುವ ನಿರ್ಧಾರಕ್ಕೆ ಇಂದು ನಡೆದ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹೀಗಾಗಿ ಇನ್ನು
ರಾಮನಗರ ಜಿಲ್ಲೆ ‌ಹೆಸರು ಬದಲಾವಣೆ


ಬೆಂಗಳೂರು, 26 ಜುಲೈ (ಹಿ.ಸ.) :

ಆ್ಯಂಕರ್ : ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡೋ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಠ ಕೊನೆಗೂ ಗೆದ್ದಿದೆ. ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರು ನಾಮಕರಣ ಮಾಡುವ ನಿರ್ಧಾರಕ್ಕೆ ಇಂದು ನಡೆದ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹೀಗಾಗಿ ಇನ್ನು ಮುಂದೆ ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಜಿಲ್ಲೆ ಅಂತಾ ಮರು ಹೆಸರು ಪಡೆಯಲಿದೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಚಿವ ಹೆಚ್.ಕೆ. ಪಾಟೀಲ್ ರಾಮನಗರ ಜಿಲ್ಲೆಯ ಹೆಸರು ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮರು ನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಜನರ ಬೇಡಿಕೆ ಮೇಲೆ ಈ ನಿರ್ಣಯ ಮಾಡಲಾಗಿದ್ದು, ಬ್ರ್ಯಾಂಡ್ ಬೆಂಗಳೂರು ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ‌ ಮಾಡಲಾಗಿದೆ ಅಂತ ತಿಳಿಸಿದರು. ರಾಮನಗರ ಜಿಲ್ಲೆಯ ಹೆಸರು ಮಾತ್ರ ಬದಲಾವಣೆ ಆಗಲಿದೆ. ಅದನ್ನ ಹೊರತುಪಡಿಸಿ ಉಳಿದ ಎಲ್ಲವೂ ಈಗ ಇರುವಂತೆ ಇರಲಿದೆ. ಇದು ಚುನಾವಣೆ ದೃಷ್ಟಿಯಿಂದ ಮಾಡಿರೋದಲ್ಲ. ಜನರ ಬೇಡಿಕೆ ಹಿನ್ನಲೆಯಲ್ಲಿ ಮಾಡಿದ್ದು ಅಂತ ಸಚಿವರು ಹೆಚ್.ಕೆ. ಪಾಟೀಲ್ ಸಮರ್ಥನೆ ಮಾಡಿಕೊಂಡರು.

ಹಿಂದೂಸ್ತಾನ್ ಸಮಾಚಾರ್

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande