ಬಂಧಿತ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥ,ಆಸ್ಪತ್ರೆಗೆ ದಾಖಲೆ
ಬೆಂಗಳೂರು, 27 ಜುಲೈ (ಹಿ.ಸ.)​: ಆ್ಯಂಕರ್ ​: ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ ಪಡಿಸಿದ ಆರೋಪದ ಅಡಿಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದರು. ಪೊಲೀಸ್ ಕಸ್ಟಡಿಯಲ್ಲಿರುವ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥಗೊಂಡಿದ್ದಾರೆ. ರಾಜಸ್ಥಾನದಿಂದ ರ
/activist-puneeth-kerehalli-arrested-and-hospitalised/


ಬೆಂಗಳೂರು, 27 ಜುಲೈ (ಹಿ.ಸ.)​:

ಆ್ಯಂಕರ್ ​: ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ ಪಡಿಸಿದ ಆರೋಪದ ಅಡಿಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದರು. ಪೊಲೀಸ್ ಕಸ್ಟಡಿಯಲ್ಲಿರುವ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥಗೊಂಡಿದ್ದಾರೆ.

ರಾಜಸ್ಥಾನದಿಂದ ರಾಜ್ಯಕ್ಕೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ನೂರಾರು ಮಾಂಸದ ಬಾಕ್ಸ್‌ಗಳನ್ನು ತುಂಬಿರುವ ವಾಹನವನ್ನು ತಡೆದಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಮಧ್ಯರಾತ್ರಿ ಬಂಧಿಸಿದ್ದರು.

ಪೊಲೀಸ್ ಠಾಣೆಯಲ್ಲಿದ್ದ ಪುನೀತ್ ಅಸ್ವಸ್ಥಗೊಂಡು ಮಲಗಿದ್ದಾರೆ. ಕೂಡಲೇ ಕಾಟನ್​ಪೇಟೆ ಪೊಲೀಸರು ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಠಾಣೆಯಲ್ಲಿ ಸುಸ್ತಾಗಿ ಮಲಗಿದ್ದ ಪುನೀತ್​ನನ್ನು ಪೊಲೀಸ್ ಸಿಬ್ಬಂದಿ ಕರೆದುಕೊಂಡು ಬಂದಿದ್ದಾರೆ.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪುನೀತ್​​ನನ್ನು ವ್ಹೀಲ್ ಚೇರ್ ಮೂಲಕ ಕರೆದುಕೊಂಡು ಹೋಗಿದ್ದಾರೆ.

ಇದೀಗ ಕೆಸಿ ಜನರಲ್ ಆಸ್ಪತ್ರೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 4.45 ಕ್ಕೆ ತೀವ್ರವಾಗಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಕೆ.ಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಪುನೀತ್ ಕೆರೆಹಳ್ಳಿಯನ್ನು ಕರೆದುಕೊಂಡು ಬಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ


 rajesh pande