ಕೆಆರ್‌ಎಸ್‌ನಿಂದ 1.30 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ,ನಾಡಿದ್ದು ಮುಖ್ಯಮಂತ್ರಿಯಿಂದ ಬಾಗಿನ ಸಮರ್ಪಣೆ
ಮಂಡ್ಯ, 27 ಜುಲೈ (ಹಿ.ಸ.)​: ಆ್ಯಂಕರ್ ​: ಕೊಡಗು , ಹಾಸನ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಮಂಡ್ಯದಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದಿಂದ 1.30 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಜೋರಾಗಿದ್ದು ಹಾರಂಗಿ ಮತ್ತು ಹೇಮಾವತಿ ಜಲಾಶಯದಿಂ
karnataka-rain-130000-cusec-water-release


ಮಂಡ್ಯ, 27 ಜುಲೈ (ಹಿ.ಸ.)​:

ಆ್ಯಂಕರ್ ​: ಕೊಡಗು , ಹಾಸನ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಮಂಡ್ಯದಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದಿಂದ 1.30 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಜೋರಾಗಿದ್ದು ಹಾರಂಗಿ ಮತ್ತು ಹೇಮಾವತಿ ಜಲಾಶಯದಿಂದ ಭಾರೀ ಪ್ರಮಾಣದ ನೀರನ್ನು ನದಿ ಹರಿಸಲಾಗುತ್ತಿದೆ. ಪರಿಣಾಮ ಕ್ಷಣ ಕ್ಷಣಕ್ಕೂ ಕೆಆರ್‌ಎಸ್‌ ಒಳ ಹರಿವು ಹಾಗೂ ಹೊರಹರಿವಿನಲ್ಲಿ ಏರಿಕೆಯಾಗುತ್ತಿದೆ.

ಜಲಾಶಯ ಈಗಾಗಲೇ ಸಂಪೂರ್ಣ ಭರ್ತಿಯಾಗಿದೆ. 124.84 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ 124.80 ಅಡಿ ನೀರು ಸಂಗ್ರಹವಾಗಿದೆ. 1,20,000 ಕ್ಯೂಸೆಕ್ ಒಳ ಹರಿವು ಇದ್ದು 1,30,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. 49.452 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 48.643 ಟಿಎಂಸಿ ನೀರು ಸಂಗ್ರಹಗೊಂಡಿದೆ.

ಎರಡು ವರ್ಷದ ಬಳಿಕ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜುಲೈ 29 ಸೋಮವಾರ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಸಮರ್ಪಣೆ ಮಾಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ಹೆಗ್ಗಡದೇವನಕೋಟೆ ತಾಲೂಕಿನ ಬಿಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಾಗಿನ ಸಮರ್ಪಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ


 rajesh pande