ಗೋಲನ್ ಹೈಟ್ಸ್, 28 ಜುಲೈ (ಹಿ.ಸ.) :
ಆ್ಯಂಕರ್ : ಇಸ್ರೇಲ್ ಆಕ್ರಮಿತ ಗೋಲನ್ ಹೈಟ್ಸ್ ಪ್ರದೇಶದ ಹಳ್ಳಿಯೊಂದರ ಮೇಲೆ ನಡೆದ ರಾಕೆಟ್ ದಾಳಿಯಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿದರು. ಅಕ್ಟೋಬರ್ 7 ರಿಂದ ತನ್ನ ಮೇಲೆ ನಡೆದ ಅತ್ಯಂತ ಭೀಕರ ದಾಳಿ ಎಂದು ಇಸ್ರೇಲ್ ಬಣ್ಣಿಸಿದೆ.
ಇಸ್ರೇಲ್ ಮೇಲೆ ಹಿಜ್ಬುಲ್ಲಾ ನಡೆಸಿದ ರಾಕೆಟ್ ದಾಳಿಯಲ್ಲಿ ಮಕ್ಕಳು ಸೇರಿ 12 ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇಸ್ರೇಲ್ ಪ್ರಕಾರ, ಅಕ್ಟೋಬರ್ 7 ರಂದು ಹೋರಾಟ ಪ್ರಾರಂಭವಾದ ನಂತರ ಹಿಜ್ಬುಲ್ಲಾ ನಡೆಸಿದ ಅತಿ ದೊಡ್ಡ ದಾಳಿ ಇದಾಗಿದೆ.
ಲೆಬನಾನ್ನಿಂದ ಹಾರಿಸಲಾದ ರಾಕೆಟ್ ಗೋಲನ್ ಹೈಟ್ಸ್ನ ಉತ್ತರದ ಡ್ರೂಜ್ ಪಟ್ಟಣವಾದ ಮಜ್ಡಾಲ್ ಶಾಮ್ಸ್ನಲ್ಲಿರುವ ಫುಟ್ಬಾಲ್ ಮೈದಾನಕ್ಕೆ ಅಪ್ಪಳಿಸಿತು. ಲೆಬನಾನ್ನಿಂದ ಇಸ್ರೇಲ್ ಭೂಪ್ರದೇಶಕ್ಕೆ ಬಿದ್ದ 30 ಸ್ಪೋಟಕಗಳನ್ನು ಗುರುತಿಸಿರುವುದಾಗಿ ಇಸ್ರೇಲ್ ಹೇಳಿದೆ.
ಕೆಲವು ಇಸ್ರೇಲಿ ನಾಯಕರು ಪ್ರತೀಕಾರಕ್ಕೆ ಕರೆ ನೀಡಿದ್ದಾರೆ. ಆದರೆ, ರಾಕೆಟ್ ಹಾರಿಸಿರುವುದನ್ನು ಹಿಜ್ಬುಲ್ಲಾ ನಿರಾಕರಿಸಿದೆ. ಕಳೆದ 10 ತಿಂಗಳಿಂದ ಇಸ್ರೇಲ್ ಸೇನೆ ಮತ್ತು ಹಿಜ್ಬುಲ್ಲಾ ಪರಸ್ಪರ ಗುಂಡಿನ ದಾಳಿ ನಡೆಸುತ್ತಿದೆ. ಈ ದಾಳಿಗೂ ಮುನ್ನವೇ ಇಬ್ಬರ ನಡುವಿನ ಘರ್ಷಣೆ ಕಾದಾಟದ ಹಂತ ತಲುಪಿದೆ ಎನ್ನಲಾಗುತ್ತಿದೆ.
ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿದ್ದಾರೆ.ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕದಿಂದ ವಾಪಸಾದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಅಲ್ಲಲ್ಲಿ ಘರ್ಷಣೆಗೆ ಬದಲಾಗಿ, ಹಿಜ್ಬುಲ್ಲಾ ಜೊತೆ ಪೂರ್ಣ ಪ್ರಮಾಣದ ಯುದ್ಧದ ಭೀತಿ ಈಗ ಹೆಚ್ಚಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ