ಬಳ್ಳಾರಿ, 29 ಜುಲೈ (ಹಿ.ಸ.) :
ಆ್ಯಂಕರ್ : ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಬಳ್ಳಾರಿ ತಾಲ್ಲೂಕಿನ ಶ್ರೀಧರಗಡ್ಡೆ ಗ್ರಾಮದ ಎಸ್.ಬಿ.ದೊಡ್ಡನಗೌಡ (67) ಜು.23 ರಂದು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.
ಚಹರೆ ಗುರುತು: ಎತ್ತರ 5.9 ಅಡಿ, ಕೋಲು ಮುಖ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ತಲೆಯಲ್ಲಿ ಕಪ್ಪು ಮಿಶ್ರಿತ ಬಿಳಿ ಕೂದಲು, ಬಿಳಿ ಮೀಸೆ ಹೊಂದಿರುತ್ತಾರೆ.
ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಪಂಚೆ ಮತ್ತು ಮೆರೊನ್ ರೆಡ್ ಬಣ್ಣದ ಪುಲ್ ಶರ್ಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾರೆ.
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೊಲ್ ರೂಂ ಸಂ.08392-258100 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್ / ಮನೋಹರ ಯಡವಟ್ಟಿ