ಟೋಕಿಯೊ, 29 ಜುಲೈ (ಹಿ.ಸ.) :
ಆ್ಯಂಕರ್ : ವಿದೇಶಾಂಗ ಸಚಿವ ಡಾ. ಎಸ್.ಜೈಶಂಕರ್ ಇಂದು ಟೋಕಿಯೊದಲ್ಲಿ ನಡೆಯಲಿರುವ ಕ್ವಾಡ್ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಜೈಶಂಕರ್ ಅವರು, ಎರಡು ದಿನಗಳ ಜಪಾನ್ ಪ್ರವಾಸಕ್ಕಾಗಿ ನಿನ್ನೆ ಟೋಕಿಯೊಗೆ ತೆರಳಿದ್ದಾರೆ.
ಕ್ವಾಡ್ ವಿದೇಶಾಂಗ ಸಚಿವರ ಸಭೆಯಲ್ಲಿ ಆಸ್ಟ್ರೇಲಿಯಾ, ಭಾರತ, ಜಪಾನ್ ಮತ್ತು ಅಮೆರಿಕದ ಉನ್ನತ ರಾಜತಾಂತ್ರಿಕರು ಸೇರಲಿದ್ದಾರೆ. ಸಭೆಯ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಕ್ವಾಡ್ ವಿದೇಶಾಂಗ ಸಚಿವರ ಸಭೆ ಕ್ವಾಡ್ ಕಾರ್ಯಸೂಚಿಯನ್ನು ಮುಂದಕ್ಕೆ ಕೊಂಡೊಯ್ಯಲು ಮತ್ತು ಇಲ್ಲಿಯವರೆಗೆ ಸಾಧಿಸಿದ ಎಲ್ಲವನ್ನೂ ತಿಳಿದುಕೊಳ್ಳಲು ಒಂದು ಅಮೂಲ್ಯ ಸಂದರ್ಭವಾಗಿದೆ ಎಂದು ಹೇಳಿದರು.
ನಾಲ್ಕು ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಪಾಲುದಾರಿಕೆಯಾದ ಕ್ವಾಡ್, ಮುಕ್ತ, ಸ್ಥಿರ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್ ಪ್ರದೇಶವನ್ನು ಬೆಂಬಲಿಸಲು ಬದ್ಧವಾಗಿದೆ. ಈ ಸಭೆ ಹಿಂದಿನ ಚರ್ಚೆಗಳಿಗೆ ಬಲ ನೀಡುವ ನಿರೀಕ್ಷೆಯಿದೆ ಹಾಗೂ ಸದಸ್ಯ ರಾಷ್ಟ್ರಗಳ ನಡುವಿನ ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತದೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ