ಪ್ರೇಕ್ಷಣೀಯ ತಾಣಗಳಿಗೆ ಪ್ರವಾಸಿಗರ ನಿರ್ಬಂಧ
ಮೈಸೂರು, 01 ಆಗಸ್ಟ್ (ಹಿ.ಸ.) : ಆ್ಯಂಕರ್ : ಮಂಡ್ಯ ಜಿಲ್ಲೆಯ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಕೃಷ್ಣರಾಜ ಸಾಗರದ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ, ಜಲಾಶಯದಿಂದ ಸುಮಾರು ಒಂದು ಲಕ್ಷದ ೭೦ ಸಾವಿರ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಹರಿಸಲಾಗಿದೆ. ಈ
ಪ್ರೇಕ್ಷಣೀಯ ತಾಣಗಳಿಗೆ ಪ್ರವಾಸಿಗರ ನಿರ್ಬಂಧ


ಮೈಸೂರು, 01 ಆಗಸ್ಟ್ (ಹಿ.ಸ.) :

ಆ್ಯಂಕರ್ : ಮಂಡ್ಯ ಜಿಲ್ಲೆಯ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಕೃಷ್ಣರಾಜ ಸಾಗರದ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ, ಜಲಾಶಯದಿಂದ ಸುಮಾರು ಒಂದು ಲಕ್ಷದ ೭೦ ಸಾವಿರ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಹರಿಸಲಾಗಿದೆ.

ಈ ಹಿನ್ನಲೆಯಲ್ಲಿ ಪ್ರವಾಹದಂತೆ ನೀರು ಹರಿಯುತ್ತಿರುವುದರಿಂದ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಕೆ.ಆರ್.ಎಸ್ ಜಲಾಶಯ, ಬೃಂದಾವನ ಉದ್ಯಾನವನ, ಪಶ್ಚಿಮವಾಹಿನಿ, ಬಲಮುರಿ ಎಡಮುರಿ, ವೆಲ್ಲೆಸ್ಲಿ ಸೇತುವೆ, ನಿಮಿಷಾಂಭ ದೇವಸ್ಥಾನದ ಪಕ್ಕದಲ್ಲಿರುವ ಸ್ನಾನ ಘಟ್ಟ, ರಂಗನತಿಟ್ಟು ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ


 rajesh pande