ಎಸ್‍ಎಸ್‍ಎಲ್‍ಸಿ ಪರೀಕ್ಷೆ-3 : ಜಿಲ್ಲೆಯಲ್ಲಿ 2894 ವಿದ್ಯಾರ್ಥಿಗಳು ನೋಂದಣಿ
ಬಳ್ಳಾರಿ, 01 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಇದೇ ಆ.02 ರಿಂದ 09 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ-3 ನಡೆಯಲಿದ್ದು, ಪರೀಕ್ಷೆಗೆ 2894 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಬಿ.ಉಮಾದೇವಿ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ಹ
ಎಸ್‍ಎಸ್‍ಎಲ್‍ಸಿ ಪರೀಕ್ಷೆ-3 : ಜಿಲ್ಲೆಯಲ್ಲಿ 2894 ವಿದ್ಯಾರ್ಥಿಗಳು ನೋಂದಣಿ


ಬಳ್ಳಾರಿ, 01 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಇದೇ ಆ.02 ರಿಂದ 09 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ-3 ನಡೆಯಲಿದ್ದು, ಪರೀಕ್ಷೆಗೆ 2894 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಬಿ.ಉಮಾದೇವಿ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು,ಜಿಲ್ಲೆಯಲ್ಲಿ 10 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ 10 ಮುಖ್ಯ ಅಧೀಕ್ಷಕರು, 07 ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದಿದ್ದಾರೆ.

ಮಾರ್ಗಾಧಿಕಾರಿಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಖಜಾನೆಯಿಂದ ಪಡೆದು ಪರೀಕ್ಷಾ ಕೇಂದ್ರಗಳಿಗೆ ವಿತರಿಸಬೇಕು. ತಾಲ್ಲೂಕು ಕೇಂದ್ರದಿಂದ ಜಿಲ್ಲಾ ಕೇಂದ್ರಕ್ಕೆ ಉತ್ತರ ಪತ್ರಿಕೆಗಳನ್ನು ರವಾನಿಸುವ ಸಮಯದಲ್ಲಿ ಸೂಕ್ತ ಪೆÇೀಲಿಸ್ ಬಂದೋಬಸ್ತ್ ಒದಗಿಸಬೇಕು ಎಂದು ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

ಗ್ರಾಮೀಣ ಪ್ರದೇಶದಿಂದ ಪರೀಕ್ಷಾ ಕೇಂದ್ರಗಳಿಗೆ ಬರುವ ವಿದ್ಯಾರ್ಥಿಗಳಿಗೆ ಸೂಕ್ತ ಸಮಯದಲ್ಲಿ ಸಾರಿಗೆ ವ್ಯವಸ್ಥೆ, ಪರೀಕ್ಷಾ ದಿನಗಳಂದು ಪರೀಕ್ಷಾ ಸಮಯದಲ್ಲಿ ನಿರಂತರ ವಿದ್ಯುತ್ ಸಂಪರ್ಕ ಒದಗಿಸಬೇಕು. ಅದೇ ರೀತಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿಕೊಳ್ಳಲು 20 ಕ್ಯಾಂಪ್ ಕಸ್ಟೊಡಿಯನ್, ಮೊಬೈಲ್ ಸ್ವಾಧೀನಾಧಿಕಾರಿಗಳು, ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಎಸ್.ಎಸ್.ಎಲ್.ಸಿ ಪರೀಕ್ಷೆ-1, 2ರನ್ನು ನಡೆಸಲಾಗಿದ್ದು, ಪರೀಕ್ಷಾ ಕಾರ್ಯಗಳಿಗೆ ನಿಯೋಜನೆಗೊಂಡಿರುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಅಗತ್ಯ ಪೂರ್ವ ಸಿಧ್ಧತೆಯನ್ನು ಮಂಡಳಿಯ ಸುತ್ತೋಲೆಯ ಮಾರ್ಗಸೂಚಿ ಪ್ರಕಾರ ಕಾರ್ಯನಿರ್ವಹಿಸುವಂತೆ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್ / ಮನೋಹರ ಯಡವಟ್ಟಿ


 rajesh pande