ಬೆಂಗಳೂರು, 1 ಆಗಸ್ಟ್ (ಹಿ.ಸ.) :
ಆ್ಯಂಕರ್ : ನಾವು ಅವರ ಪಾದಯಾತ್ರೆಗೆ ತಿರುಗೇಟು ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಬಿಜೆಪಿ ಆಡಳಿತ ಅವಧಿಯ ೩೦ ಹಗರಣಗಳಿವೆ. ದಿನಾ ಒಂದೊಂದು ಹಗರಣ ಬಿಚ್ಚಿಡುತ್ತೇವೆ. ಅವರ ಪಾದಯಾತ್ರೆ ಅಂತಿಮ ರೂಪುರೇಷೆ ಬಂದರೆ ನಾವು ನಮ್ಮ ಕಾರ್ಯಸೂಚಿ ತೀರ್ಮಾನ ಮಾಡುತ್ತೇವೆ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಬಿಜೆಪಿ ಪಾದಯಾತ್ರೆ ಸಂಬಂಧ ಮೈತ್ರಿಯಲ್ಲಿ ಅಪಸ್ವರ ಮೂಡಿರುವ ಬಗ್ಗೆ ವಿಧಾನ ಸೌಧದ ಆವರಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,
ಕುಮಾರಸ್ವಾಮಿ ಆಗಲಿ, ನಾನಾಗಲಿ, ಬಿಜೆಪಿಯವರಾಗಲಿ ಎಲ್ಲರೂ ಅವರವರ ಪಕ್ಷದ ರಾಜಕಾರಣ ಮಾಡುತ್ತಾರೆ. ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಹಾಗೂ ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸಿದ್ದೇನೆ. ಈ ವಿಚಾರಕ್ಕೇ ಮೈತ್ರಿಯಲ್ಲಿ ತಿಕ್ಕಾಟ ನಡೆಯುತ್ತಿರಬಹುದು ಎಂದು ತಿಳಿಸಿದರು.
ಬಿಜೆಪಿಯವರು ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲದೊಂದಿಗೆ ಸುಮಾರು ೧೦ ಕ್ಷೇತ್ರಗಳನ್ನು ಗೆದ್ದಿದ್ದಾರೆ. ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಜೆಡಿಎಸ್ ನೆಲೆ ಇರುವ ಪ್ರದೇಶ. ಇಲ್ಲಿ ಬಿಜೆಪಿಯವರು ಜೆಡಿಎಸ್ ನವರನ್ನು ಪರಿಗಣಿಸದೇ ತಮಟೆ ಬಾರಿಸಿಕೊಂಡು ನಾಯಕತ್ವ ಅಪಹರಿಸಲು ಹೋದರೆ ಅದನ್ನು ಸಹಿಸಿಕೊಳ್ಳಲು ಜೆಡಿಎಸ್ ಗೆ ಸಾಧ್ಯವೇ? ಜೆಡಿಎಸ್ ಹಾಗೂ ಬಿಜೆಪಿ ವಿಲೀನವಾಗುವುದಾದರೆ ಈ ರೀತಿ ಮಾಡಬಹುದು ಎಂದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ