ಬೆಂಗಳೂರು, 01 ಆಗಸ್ಟ್ (ಹಿ.ಸ.) :
ಆ್ಯಂಕರ್ : ‘ಭೀಮ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ನಿರತರಾಗಿರುವ ನಟ, ನಿರ್ದೇಶಕ ದುನಿಯಾ ವಿಜಯ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಬರುವ ಆಗಸ್ಟ್ 9 ರಂದು ತಮ್ಮ ‘ಭೀಮ’ ಚಲನಚಿತ್ರ ಬಿಡುಗಡೆ ಆಗುತ್ತಿದ್ದು, ಚಲನಚಿತ್ರ ನೋಡಲು ಸಿದ್ದರಾಮಯ್ಯ ಅವರನ್ನು ದುನಿಯಾ ವಿಜಯ್ ಆಹ್ವಾನಿಸಿದ್ದಾರೆ.
ಸಿದ್ದರಾಮಯ್ಯ ಅವರು ಸಹ ದುನಿಯಾ ವಿಜಯ್ರ ಆಹ್ವಾನವನ್ನು ಮನ್ನಿಸಿ, ಚಲನಚಿತ್ರ ನೋಡುವಾಗಿ ಹೇಳಿದ್ದಾರೆ ಎನ್ನಲಾಗಿದೆ.
ಕಳೆದ ವರ್ಷ ನಡೆದಿದ್ದ ‘ಭೀಮ’ ಸಿನಿಮಾಕ್ಕೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿಯೂ ಸಿದ್ದರಾಮಯ್ಯ ಭಾಗಿ ಆಗಿದ್ದರು. ಅದಕ್ಕೂ ಮುಂಚೆ ‘ಸಲಗ’ ಚಲನಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರೂ ಭಾಗಿಯಾಗಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ತಮ್ಮನ್ನು ಸಿದ್ದರಾಮಯ್ಯ ಅಭಿಮಾನಿ ಎಂದು ದುನಿಯಾ ವಿಜಯ್ ಹೇಳಿಕೊಳ್ಳುತ್ತಾರೆ. ಸಿದ್ದರಾಮಯ್ಯ ಅವರೊಟ್ಟಿಗೆ ಉತ್ತಮ ನಂಟನ್ನು ದುನಿಯಾ ವಿಜಯ್ ಹೊಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ