ನವದೆಹಲಿ, 01 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಪರಾಧಿ ಸ್ಥಾನದಲ್ಲಿದ್ದಾರೆ. ಅವರು ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರ ನೋಟಿಸ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಯಗೊಂಡಿದ್ದಾರೆ. ಇಂದು ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ವಿರುದ್ಧ ನಿರ್ಣಯ ತೆಗೆದುಕೊಂಡಿದ್ದಾರೆ. ಕಾನೂನಿನ ವಿರುದ್ಧ, ಸಂವಿಧಾನದ ವಿರುದ್ಧ ರಾಜ್ಯ ಸರ್ಕಾರ ಕೆಲಸ ಮಾಡಿದೆ. ನೀವು ತಪ್ಪು ಮಾಡಿಲ್ಲ ಎಂದರೆ ಯಾಕೆ ಹೆದರುತ್ತಿದ್ದೀರಿ ಎಂದು ಸಚಿವೆ ಪ್ರಶ್ನಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ