ನವದೆಹಲಿ, 1 ಆಗಸ್ಟ್ (ಹಿ.ಸ.) :
ಆ್ಯಂಕರ್ : ನವದೆಹಲಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹೊಸದಾಗಿ ನಿರ್ಮಾಣವಾಗಿರುವ ಸಂಸತ್ ಭವನ ಕೂಡ ಸೋರುತ್ತಿದೆ. ಸಂಸತ್ ಭವನದ ಸುತ್ತ ಮುತ್ತಲು ಸಂಪೂರ್ಣವಾಗಿ ಜಲಾವೃತಗೊಂಡಿದೆ. ಪ್ರತಿ ಪಕ್ಷಗಳು ಹಳೆಯ ಸಂಸತ್ತಿಗೆ ಹೋಲಿಕೆ ಮಾಡಲಾರಂಭಿಸಿವೆ.
ಈ ದೃಶ್ಯವನ್ನು ತಮಿಳುನಾಡಿನ ವಿರುದುನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಮಾಣಿಕ್ಕಂ ಠಾಗೋರ್ ಬಿ ಅವರು ತಮ ಎಕ್‌್ಸ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.1200 ಕೋಟಿ ಖರ್ಚು ಮಾಡಿ ನಿರ್ಮಿಸಿರುವ ನೂತನ ಸಂಸತ್ ಭವನದಲ್ಲಿ ನೀರು ಜಿನುಗುತ್ತಿದ್ದು, ಅದನ್ನು ಸಂಗ್ರಹಿಸಲು ಬಕೆಟ್ ಅನ್ನು ಇಡಲಾಗಿದೆ ಎಂದು ಅವರು ಕಿಡಿಕಾರಿದ್ದಾರೆ.
ಮೋದಿ ಸರ್ಕಾರದಲ್ಲಿ ಹೊರಗೆ ಪೇಪರ್ ಸೋರುತ್ತಿದೆ, ಒಳಗೆ ಮಳೆ ನೀರು ಸೋರುತ್ತಿದೆ ಎಂದು ಅವರು ಬಿಜೆಪಿ ವಿರುದ್ಧ ಆಕೋಶಗೊಂಡು ಬರೆದಿದ್ದಾರೆ. ಹೊಸ ಸಂಸತ್ತಿನ ಮೇಲ್ಛಾವಣಿಯಿಂದ ಜಿನುಗುವ ಮಳೆ ನೀರು ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಎಕ್ಸ್ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಈ ಹೊಸ ಸಂಸತ್ತಿಗಿಂತ ಹಳೆಯ ಸಂಸತ್ತು ಉತ್ತಮವಾಗಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕಟ್ಟಿದ ಸಂಸತ್ತಿನಲ್ಲಿ ನೀರು ಸುರಿಯುತ್ತಿರುವವರೆಗೂ ಹಳೆ ಸಂಸತ್ತಿನಲ್ಲಿ ಮತ್ತೆ ಏಕೆ ಕೆಲಸ ಮಾಡಬಾರದು ಎಂದು ಬರೆದಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಸಂಸದ ಮಾಣಿಕ್ಕಂ ಠಾಗೋರ್ ಕೂಡ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ಹೊರಗೆ ಪೇಪರ್ ಲೀಕ್ ಒಳಗೆ ನೀರು ಲೀಕ್ ಎಂದು ಬರೆದಿದ್ದಾರೆ.
ಅಧಿಕಾರಿಗಳ ಹಣದಾಸೆಗೆ ಕಳಪೆ ಕಾಮಗಾರಿಯಿಂದ ನೂತನ ಸಂಸತ್ ಭವನ ಸೋರಿಕೆಯಾಗುತ್ತಿದೆ. ಇದು ನಿಜಕ್ಕೂ ವಿಪರ್ಯಾಸ. ಸಂಸತ್ ಭವನದ ಕತೆ ಹೀಗಾದರೆ ಜನಸಾಮಾನ್ಯರ ಗತಿ ಏನು ಎಂದು ಜನ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡುತ್ತಿದ್ದಾರೆ.
ಈ ನೀರಿನ ಸೋರಿಕೆಯು ಹೊಸ ಕಟ್ಟಡದಲ್ಲಿನ ಮುಂದಿನ ಸಮಸ್ಯೆಗಳನ್ನು ಎತ್ತಿ ತೋರಿಸುತ್ತಿದೆ. ನಿರ್ಮಾಣ ಪೂರ್ಣಗೊಂಡ ಕೇವಲ ಒಂದು ವರ್ಷದ ನಂತರ ಸಂಸತ್ ಭವನ ಮಳೆ ನೀರಿನಿಂದ ತುಂಬಿ ಹೋಗಿದೆ. ಇದರಿಂದಾಗಿ ಲೋಕಸಭೆಯಲ್ಲಿ ಮುಂದೂಡಿಕೆ ನಿರ್ಣಯ ಮಂಡಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ