ಎಸ್​ಎಂವಿಟಿ ರೈಲು ನಿಲ್ದಾಣದಲ್ಲಿ ಹೊಸ ನಿಯಮ ಜಾರಿ, ಪ್ರಯಾಣಿಕರಿಗೆ ಸಂಕಷ್ಟ
ಬೆಂಗಳೂರು, 10 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜನರು ರೈಲಿನಲ್ಲಿ ಪ್ರಯಾಣ ಮಾಡುವುದು ಟಿಕೆಟ್ ದರ ಕಡಿಮೆ ಇರುತ್ತದೆ, ಆರಾಮವಾಗಿ ಗಮ್ಯ ತಲುಪಬಹುದು ಎಂದು. ಆದರೆ ಇದೀಗ ರೈಲ್ವೆ ಇಲಾಖೆ ಬೆಂಗಳೂರಿನ ಎಸ್ಎಂವಿಟಿ ರೈಲ್ವೆ ಸ್ಟೇಷನ್​ಗೆ ಬಂದು ಹೋಗುವ ವಾಹನಗಳಿಗೆ ನಿಲುಗಡೆಯ ಶುಲ್ಕ ವಿಧಿಸಲು ಮುಂದಾಗಿದೆ. ಇ
Bengaluru SMVT Railway station Introduced high Parking


ಬೆಂಗಳೂರು, 10 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜನರು ರೈಲಿನಲ್ಲಿ ಪ್ರಯಾಣ ಮಾಡುವುದು ಟಿಕೆಟ್ ದರ ಕಡಿಮೆ ಇರುತ್ತದೆ, ಆರಾಮವಾಗಿ ಗಮ್ಯ ತಲುಪಬಹುದು ಎಂದು. ಆದರೆ ಇದೀಗ ರೈಲ್ವೆ ಇಲಾಖೆ ಬೆಂಗಳೂರಿನ ಎಸ್ಎಂವಿಟಿ ರೈಲ್ವೆ ಸ್ಟೇಷನ್​ಗೆ ಬಂದು ಹೋಗುವ ವಾಹನಗಳಿಗೆ ನಿಲುಗಡೆಯ ಶುಲ್ಕ ವಿಧಿಸಲು ಮುಂದಾಗಿದೆ. ಇದಕ್ಕೆ ವಾಹನ ಸವಾರರು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರಿನ ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣಕ್ಕೆ ಪ್ರಯಾಣಿಕರನ್ನು ಇಳಿಸಲು ಮತ್ತು ಕರೆದುಕೊಂಡು ಹೋಗಲು ಬರುವ ವಾಹನಗಳು ನಿನ್ನೆ ಸೋಮವಾರದಿಂದ ಪಾರ್ಕಿಂಗ್ ಶುಲ್ಕ ಕಟ್ಟಲೇಬೇಕಾಗಿದೆ. ಸರ್​​​ಎಂ ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣದಲ್ಲಿ ಇದೀಗ ಹೊಸ ನಿಯಮ ಜಾರಿಯಾಗಿದೆ. ನಿಲ್ದಾಣದ ಆವರಣದಲ್ಲಿ ಹತ್ತು ನಿಮಿಷಕ್ಕಿಂತ ಹೆಚ್ಚು ಕಾಲ ವಾಹನಗಳು ಇದ್ದರೆ ಪಾರ್ಕಿಂಗ್ ಹಣ ನೀಡಬೇಕು. ಹತ್ತು ನಿಮಿಷಗಳ ಒಳಗೆ ಪಿಕ್ ಅಪ್, ಡ್ರಾಪ್ ಮಾಡಿ ಹೋದರೆ ಯಾವುದೇ ಶುಲ್ಕವಿಲ್ಲ. ಹನ್ನೊಂದು ನಿಮಿಷ ಆದರೂ ಹಣ ಪಾವತಿ ಮಾಡಲೇಬೇಕು.

ಒಂದು ವೇಳೆ ಸ್ಟೇಷನ್ ಒಳಗೆ ಬಂದು ಹತ್ತು ನಿಮಿಷಕ್ಕಿಂತ ಹೆಚ್ಚಿನ ಸಮಯ ಆಗುತ್ತದೆ ಎಂದಾದರೆ, ಅಂತಹ ವಾಹನ ಮಾಲೀಕರು ಸ್ಟೇಷನ್​ನಲ್ಲಿರುವ ನಿಲುಗಡೆಯ ಸ್ಥಳದಲ್ಲಿ ವಾಹನಗಳನ್ನು ನಿಲ್ಲಿಸಬಹುದು.

ಈ ಹೊಸ ನಿಯಮದ ಬಗ್ಗೆ ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಪ್ರಶ್ನಿಸಿದಾಗ, ರೈಲ್ವೆ ಅಧಿಕಾರಿಗಳ ಜೊತೆಗೆ ಮಾತನಾಡಿ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ.

ಎಸ್​​ಎಂವಿಟಿಯಲ್ಲಿ ನಿಲುಗಡೆಯ ಶುಲ್ಕ ಎಷ್ಟು?

ಹತ್ತು ನಿಮಿಷದಿಂದ ಇಪ್ಪತ್ತು ನಿಮಿಷಗಳ ವರೆಗೆ ದ್ವಿಚಕ್ರ ವಾಹನಗಳಿಗೆ ಒಂದು ವಾಹನಕ್ಕೆ 40 ರೂಪಾಯಿ. ತ್ರಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳಿಗೆ 50 ರೂಪಾಯಿ ನಿಗದಿಪಡಿಸಲಾಗಿದೆ.

20 ರಿಂದ 30 ನಿಮಿಷಕ್ಕೆ ದ್ವಿಚಕ್ರ ವಾಹನಗಳಿಗೆ ಒಂದು ವಾಹನಕ್ಕೆ 100 ರೂಪಾಯಿ, ತ್ರಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳಿಗೆ 200 ರೂಪಾಯಿ ಶುಲ್ಕವಿದೆ.

30 ನಿಮಿಷಗಳ ನಂತರ ದ್ವಿಚಕ್ರ ವಾಹನಗಳಿಗೆ ಒಂದು ವಾಹನಕ್ಕೆ 250 ರೂಪಾಯಿ, ತ್ರಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳಿಗೆ 500 ರೂಪಾಯಿ ಶುಲ್ಕವಿದೆ.

ರೈಲ್ವೆ ಇಲಾಖೆಯ ಹೊಸ ನಿಯಮಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸರಿಯಾದ ಸಮಯಕ್ಕೆ ರೈಲುಗಳು ಬರುವುದಿಲ್ಲ. ಆ ಸಮಯದಲ್ಲಿ ತಂದೆ, ತಾಯಿಯನ್ನು ಕುಟುಂಬಸ್ಥರನ್ನು ಪಿಕ್ ಅಪ್ ಮಾಡಲು ಬಂದಿರುತ್ತೇವೆ. ಅದಕ್ಕೆ ಹಣ ಪಾವತಿ ಮಾಡಬೇಕು ಅಂದರೆ ಹೇಗೆ? ಅದೂ ಕೂಡ ಇಷ್ಟೊಂದು ದುಬಾರಿ ಶುಲ್ಕ ವಿಧಿಸಿದರೆ ಹೇಗೆ? ಇಲ್ಲಿ ದುಡಿದ ದುಡ್ಡನ್ನೆಲ್ಲ ಇವರಿಗೆ ನೀಡಿದರೆ ನಾವು ಜೀವನ ಮಾಡುವುದು ಹೇಗೆ ಎಂದು ಆಟೋ ಚಾಲಕರು ಮತ್ತು ದ್ವಿಚಕ್ರ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande