ನವದೆಹಲಿ, 10 ಸೆಪ್ಟೆಂಬರ್(ಹಿ.ಸ.) :
ಆ್ಯಂಕರ್ : ಕಳೆದ ತಿಂಗಳು ನವದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಗೆ ದಾಖಲಾಗಿದ್ದ ಸಿಪಿಐ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಉಸಿರಾಟದ ಬೆಂಬಲದಲ್ಲಿದ್ದಾರೆ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.
ಸೀತಾರಾಂ ಯೆಚೂರಿ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದ್ದು, ತೀವ್ರ ಉಸಿರಾಟದ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಿಪಿಐ(ಎಂ) ಹೇಳಿಕೆಯಲ್ಲಿ ತಿಳಿಸಿದೆ.
“ಸೀತಾರಾಂ ಯೆಚೂರಿ ಅವರು ಉಸಿರಾಟದ ಬೆಂಬಲದಲ್ಲಿದ್ದಾರೆ. ವೈದ್ಯರ ತಂಡವು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ, ಅವರ ಆರೋಗ್ಯ ಸ್ಥಿತಿ ಈ ಸಮಯದಲ್ಲಿ ಗಂಭೀರವಾಗಿದೆ” ಎಂದು ಎಕ್ಸ್ನಲ್ಲಿನ ಹೇಳಿಕೆಯಲ್ಲಿ ಸಿಪಿಐಎಂ ತಿಳಿಸಿದೆ.
ತೀವ್ರ ಜ್ವರದಿಂದ ಬಳಲುತ್ತಿದ್ದ ಸೀತಾರಾಂ ಯೆಚೂರಿ ಅವರನ್ನು ಆಗಸ್ಟ್ 19ರಂದು ಏಮ್ಸ್‌ನ ತುರ್ತು ವಿಭಾಗಕ್ಕೆ ದಾಖಲಿಸಲಾಗಿತ್ತು. ನ್ಯುಮೋನಿಯಾದ ಕಾರಣದಿಂದ ಸೀತಾರಾಂ ಯೆಚೂರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ .
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್