ಕಾರು ಹಲವು ವಾಹನಗಳಿಗೆ ಡಿಕ್ಕಿ – ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷನ ಪುತ್ರ ಪರಾರಿ
ನಾಗಪುರ ,10 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ನಾಗಪುರದಲ್ಲಿ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಪುತ್ರನ ಒಡೆತನದ ಆಡಿ ಕಾರು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಪುತ್ರ ಸಾಂಕೇತ್ ಬವಾಂಕುಲೆ ಸೇರಿದಂತೆ ಮೂವರು ಘಟನೆಯ ಬಳಿಕ ಪರಾರಿಯಾಗಿ
ಬಾರ್‌ನಿಂದ ಬಂದು ಹಲವು ಕಾರುಗಳಿಗೆ ಡಿಕ್ಕಿ – ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷನ ಪುತ್ರ ಪರಾರಿ


ನಾಗಪುರ ,10 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ನಾಗಪುರದಲ್ಲಿ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಪುತ್ರನ ಒಡೆತನದ ಆಡಿ ಕಾರು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಪುತ್ರ ಸಾಂಕೇತ್ ಬವಾಂಕುಲೆ ಸೇರಿದಂತೆ ಮೂವರು ಘಟನೆಯ ಬಳಿಕ ಪರಾರಿಯಾಗಿದ್ದಾರೆ.

ನಿನ್ನೆ ಸೋಮವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಮಧ್ಯರಾತ್ರಿ ಸುಮಾರು 1 ಗಂಟೆಗೆ ನಡೆದಿದ್ದು, ಕಾರಿನಲ್ಲಿದ್ದವರು ಮದ್ಯಸೇವಿಸಿದ್ದರು ಎನ್ನಲಾಗಿದೆ. ಆಡಿ ಕಾರು ದೂರುದಾರ ಜಿತೇಂದ್ರ ಸೋಕಾಂಬ್ಲೆ ಕಾರಿಗೆ ಮೊದಲು ಡಿಕ್ಕಿ ಹೊಡೆದು, ನಂತರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರರಿಬ್ಬರಿಗೂ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯ ಕುರಿತು ಚಂದ್ರಶೇಖರ್ ಬವಾಂಕುಲೆ ಸುದ್ದಿಗಾರರೊಂದಿಗೆ ಮಾತನಾಡಿ ಆಡಿ ಕಾರು ಮಗನ ಹೆಸರಿನಲ್ಲಿ ನೋದಣಿಯಾಗಿದೆ ಎಂದು ಒಪ್ಪಿಕೊಂಡಿದ್ದಾರೆ.

ಪೊಲೀಸರು ಅಪಘಾತದ ಬಗ್ಗೆ ಯಾವುದೇ ಪಕ್ಷಪಾತ ಮಾಡದೇ ಸರಿಯಾದ ರೀತಿಯಲ್ಲಿ ತನಿಖೆ ನಡೆಸಬೇಕು ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande