ನವದೆಹಲಿ, 10 ಸೆಪ್ಟೆಂಬರ್(ಹಿ.ಸ.) :
ಆ್ಯಂಕರ್ : ಉತ್ತರ ಪ್ರದೇಶದ ಗ್ರೇಟರ್ ನೋಯಿಡಾದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ ಸೆಮಿಕಾನ್ ಇಂಡಿಯಾ ೨೦೨೪ ಸಮಾವೇಶದಲ್ಲಿ ೨೪ ದೇಶಗಳ ೨೫೦ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ ಎಂದು ಭಾರತೀಯ ಸೆಮಿಕಂಡಕ್ಟರ್ ಮಿಷನ್‌ನ ಸಿಇಒ ಆಕಾಶ್ ತ್ರಿಪಾಠಿ ತಿಳಿಸಿದ್ದಾರೆ.
ದೇಶದ ಅತ್ಯಂತ ಕ್ಲಿಷ್ಟಕರ ವಲಯದ ಕ್ಷಿಪ್ರ ಬೆಳವಣಿಗೆ ಹಿನ್ನೆಲೆಯಲ್ಲಿ ವಿದೇಶಿ ಕಂಪನಿಗಳು ಸಮಾವೇಶದಲ್ಲಿ ಭಾಗವಹಿಸಲು ಉತ್ಸುಕತೆ ತೋರಿವೆ ಎಂದು ಸರ್ಕಾರ ಹೇಳಿದೆ.
ಈ ಕಂಪನಿಗಳು ಇಡೀ ಸೆಮಿಕಂಡಕ್ಟರ್ ಪೂರೈಕೆ ಸರಪಳಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವುದರ ಜೊತೆಗೆ ಹೊಸ ಪಾಲುದಾರಿಕೆಯನ್ನು ಮಾಡಿಕೊಳ್ಳಲು ಮುಂದಾಗಲಿವೆ ಎಂದು ಭಾರತೀಯ ಸೆಮಿಕಂಡಕ್ಟರ್ ಮಿಷನ್‌ನ ಸಿಇಒ ಆಕಾಶ್ ತ್ರಿಪಾಠಿ ತಿಳಿಸಿದ್ದಾರೆ.
ಎಲ್ಲಾ ಪ್ರಮುಖ ಸೆಮಿಕಂಡಕ್ಟರ್ ಪೂರೈಕೆ ಸರಪಳಿಯ ಕಂಪನಿಗಳು ಭಾಗವಹಿಸಲು ಈ ಸಮಾವೇಶ ಬೃಹತ್ ವೇದಿಕೆಯನ್ನು ಒದಗಿಸಲಿದೆ ಎಂದು ಆಕಾಶ್ ತ್ರಿಪಾಠಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್