ದ್ವಿಪಕ್ಷೀಯ ಮಾತುಕತೆ - ರಷ್ಯಾ ಅಧ್ಯಕ್ಷರ ಪ್ರಸ್ತಾಪ
ಸೇಂಟ್ ಪೀಟರ್ಸ್‌ಬರ್ಗ್‌, 13 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್ :ರಷ್ಯಾದ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ದೇಶಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರ ಸಭೆಯ ಸಂದರ್ಭದಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭ
ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುವ ಬಗ್ಗೆಯೂ ರಷ್ಯಾ ಅಧ್ಯಕ್ಷರು ಪ್ರಸ್ತಾಪಿಸಿ


ಸೇಂಟ್ ಪೀಟರ್ಸ್‌ಬರ್ಗ್‌, 13 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್ :ರಷ್ಯಾದ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ದೇಶಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರ ಸಭೆಯ ಸಂದರ್ಭದಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಅಜಿತ್ ದೋವಲ್ ಅವರೊಂದಿಗಿನ ಮಾತುಕತೆಯ ವೇಳೆ ವ್ಲಾಡಿಮಿರ್ ಪುಟಿನ್ ಅವರು, ಭಾರತ ಮತ್ತು ರಷ್ಯಾ ನಡುವಿನ ವಿಶೇಷ ಹಾಗೂ ಆದ್ಯತೆಯ ಕಾರ್ಯತಂತ್ರ ಪಾಲುದಾರಿಕೆಯನ್ನು ಶ್ಲಾಘಿಸಿದರು. ಅಲ್ಲದೆ, ದ್ವಿಪಕ್ಷೀಯ ಸಂಬಂಧಗಳಲ್ಲಿ ಭದ್ರತಾ ಸಮಸ್ಯೆಗಳ ನಿರ್ಣಾಯಕ ಪಾತ್ರದ ಕುರಿತು ಒತ್ತಿ ಹೇಳಿದರು ಎಂದು ಭಾರತದಲ್ಲಿರುವ ರಷ್ಯಾದ ರಾಯಬಾರಿ ಕಚೇರಿ ತಿಳಿಸಿದೆ. ಕಜಾನ್‌ನಲ್ಲಿ ಮುಂದಿನ ತಿಂಗಳು ಅಕ್ಟೋಬರ್ ೨೨ರಂದು ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುವ ಬಗ್ಗೆಯೂ ರಷ್ಯಾ ಅಧ್ಯಕ್ಷರು ಪ್ರಸ್ತಾಪಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande