ಕಾಮುಕ ಶಿಕ್ಷಕನ ಬಂಧನ
ಬೆಳಗಾವಿ, 14 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನೋರ್ವನನ್ನು ಚಿಕ್ಕೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಸಂಜೆ ವಿದ್ಯಾರ್ಥಿನಿ ದುಖ:ದಿಂದ ಶಾಲೆಯಿಂದ ಮನೆಗೆ ಮರಳಿದ
Arrest


ಬೆಳಗಾವಿ, 14 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನೋರ್ವನನ್ನು ಚಿಕ್ಕೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಿನ್ನೆ ಸಂಜೆ ವಿದ್ಯಾರ್ಥಿನಿ ದುಖ:ದಿಂದ ಶಾಲೆಯಿಂದ ಮನೆಗೆ ಮರಳಿದ್ದಾಳೆ, ಈ ಕುರಿತು ಪೋಷಕರು ಬಾಲಕಿಯನ್ನು ಪ್ರಶ್ನಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಕೂಡಲೇ ಬಾಲಕಿಯ ತಂದೆ ಇತರೆ ಪೋಷಕರಿಗೆ ಮಾಹಿತಿ ನೀಡಿ ವಿಚಾರಿಸಿದಾಗ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಈ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ.ಪೋಷಕರು ಪೋಲಿಸರಿಗೆ ದೂರು ನೀಡಿದ್ದಾರೆ. ಸದ್ಯ ಆರೋಪಿ ಶಿಕ್ಷಕನನ್ನು ಬಂದಿಸಿರುವ ಚಿಕ್ಕೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande