ಡೈಮಂಡ್ ಲೀಗ್ ಫೈನಲ್; ಜಾವೆಲಿನ್ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಭಾಗಿ
ಬ್ರುಸೆಲ್ಸ್‌, 14 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬೆಲ್ಜಿಯಂನ ಬ್ರುಸೆಲ್ಸ್‌ನಲ್ಲಿ ಇಂದಿನಿಂದ ಆರಂಭವಾಗಲಿರುವ ೨೦೨೪ರ ಡೈಮಂಡ್ ಲೀಗ್ ಫೈನಲ್‌ನಲ್ಲಿ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇಂದು ಬೆಳ್ಳಿ ಪದಕ ವಿಜೇತ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಸ್ಪರ್ಧಿಸಲಿದ್ದಾರೆ. ವಿಶ್ವದ ಅಗ್ರಮಾನ್
ಬ್ರುಸೆಲ್ಸ್‌


ಬ್ರುಸೆಲ್ಸ್‌, 14 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬೆಲ್ಜಿಯಂನ ಬ್ರುಸೆಲ್ಸ್‌ನಲ್ಲಿ ಇಂದಿನಿಂದ ಆರಂಭವಾಗಲಿರುವ ೨೦೨೪ರ ಡೈಮಂಡ್ ಲೀಗ್ ಫೈನಲ್‌ನಲ್ಲಿ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇಂದು ಬೆಳ್ಳಿ ಪದಕ ವಿಜೇತ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಸ್ಪರ್ಧಿಸಲಿದ್ದಾರೆ.

ವಿಶ್ವದ ಅಗ್ರಮಾನ್ಯ ಅಥ್ಲೀಟ್ಸ್‌ಗಳು ಡೈಮಂಡ್ ಲೀಗ್‌ನಲ್ಲಿ ಪಾಲ್ಗೊಳ್ಳಲಿದ್ದು, ತಮ್ಮ ತಮ್ಮ ವಿಭಾಗಗಳಲ್ಲಿ ಜಯಶಾಲಿಯಾಗಲು ಪೈಪೋಟಿ ನಡೆಸಲಿದ್ದಾರೆ. ನೀರಜ್ ಚೋಪ್ರಾ, ಜಾವೆಲಿನ್ ಸ್ಪರ್ಧೆಯ ಫೈನಲ್‌ನಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲಿದ್ದಾರೆ. ಪ್ರಸ್ತುತ್ ನೀರಜ್ ೧೪ ಅಂಕಗಳೊಂದಿಗೆ ೪ನೇ ಸ್ಥಾನದಲ್ಲಿದ್ದಾರೆ. ಗ್ರೆನಡಾದ ಆಂಡರ್ಸನ್ ಪೀಟರ‍್ಸ್ ಹಾಗೂ ಜರ್ಮನಿಯ ಜೂಲಿಯನ್ ವೆಬರ್ ಕಠಿಣ ಪ್ರತಿಸ್ಪರ್ಧಿಗಳಾಗಿದ್ದಾರೆ. ಪಂದ್ಯ ಭಾರತೀಯ ಕಾಲಮಾನ ಮಧ್ಯರಾತ್ರಿ ೧.೫೦ಕ್ಕೆ ಸ್ಪರ್ಧೆ ಆರಂಭವಾಗಲಿದೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande