ಖೋಖೋ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕಲಬುರಗಿ, 14 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ :.ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಶಿಲಾರಕೂಟ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಬಾಲಕರ ವಿಭಾಗದ ತಾಲೂಕು ಮಟ್ಟದ ಖೋಖೋ ಪಂದ್ಯಾವಳಿಯಲ್ಲಿ ಜಯ ಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಂತಿಮ
Sports


ಕಲಬುರಗಿ, 14 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ :.ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಶಿಲಾರಕೂಟ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಬಾಲಕರ ವಿಭಾಗದ ತಾಲೂಕು ಮಟ್ಟದ ಖೋಖೋ ಪಂದ್ಯಾವಳಿಯಲ್ಲಿ ಜಯ ಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಮುಧೋಳ ಬಾಲಕರ ಶಾಲೆ ತಂಡದ ವಿರುದ್ದ ಜಯ ಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.

ಸತತ ಮೂರು ವರ್ಷಗಳಿಂದ ತಾಲೂಕು ಮಟ್ಟದಲ್ಲಿ ಜಯ ಸಾಧಿಸಿರುವ ಶಾಲೆ ವಿದ್ಯಾರ್ಥಿಗಳು ಈ ಭಾರಿ ಜಿಲ್ಲಾ ಮಟ್ಟದಲ್ಲಿ ಜಯಗಳಿಸಲಿ ಎಂದು ಶಾಲಾ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಶುಭ ಹಾರೈಸಿದ್ದಾರೆ. ಇನ್ನೂ ಇದೇ ಶಾಲೆಯ ಬಾಲಕ ಸಂಜೀವ ೧೦೦ಮೀಟರ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande