ಛತ್ತೀಸ್​ಗಢ : ವಾಮಾಚಾರ ಶಂಕೆ, ಒಂದೇ ಕುಟುಂಬದ ಐವರ ಕೊಲೆ
ಸುಕ್ಮಾ, 16 ಸೆಪ್ಟೆಂಬರ್(ಹಿ.ಸ.) : ಆ್ಯಂಕರ್ : ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಮುಖ್ಯ ಪೇದೆ ಕೂಡ ಸೇರಿದ್ದಾರೆ. ಪೊಲೀಸರ ಪ್ರಕಾರ, ಗ್ರಾಮದ ಕೆಲವು ಜನರು ವಾಮಾಚಾರವನ್ನು ನಡೆಸುತ್ತಾರೆ, ಇ
Chhattisgarh


ಸುಕ್ಮಾ, 16 ಸೆಪ್ಟೆಂಬರ್(ಹಿ.ಸ.) :

ಆ್ಯಂಕರ್ : ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಮುಖ್ಯ ಪೇದೆ ಕೂಡ ಸೇರಿದ್ದಾರೆ.

ಪೊಲೀಸರ ಪ್ರಕಾರ, ಗ್ರಾಮದ ಕೆಲವು ಜನರು ವಾಮಾಚಾರವನ್ನು ನಡೆಸುತ್ತಾರೆ, ಇದು ಗ್ರಾಮಸ್ಥರಿಗೆ

ಹಾನಿಯನ್ನುಂಟುಮಾಡುತ್ತಿದೆ, ಇದರಿಂದಾಗಿ ಐವರನ್ನೂ ಹೊಡೆದು ಹತ್ಯೆ ಮಾಡಿದ್ದಾರೆ. ಕಳೆದ ದಿನ ಸೆಪ್ಟೆಂಬರ್ 15 ರಂದು ರಾತ್ರಿ ಗ್ರಾಮದ ಸುಮಾರು 15 ಜನರು ಮನೆಗೆ ನುಗ್ಗಿ ಕುಟುಂಬ ಸದಸ್ಯರೆಲ್ಲರ ಮೇಲೆ ಒಬ್ಬೊಬ್ಬರಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ದೊಣ್ಣೆ, ಕೊಡಲಿಯಿಂದ ತೀವ್ರವಾಗಿ ಥಳಿಸಲಾಗಿದೆ. ಬಳಿಕ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಇದಾದ ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಮೃತರನ್ನು ಮೌಸಂ ಕನ್ನಾ, ಮೌಸಂ ಬುಚ್ಚಾ, ಮೌಸಂ ಬಿರಿ, ಕರ್ಕ ಲಚ್ಚಿ ಮತ್ತು ಮೌಸಂ ಅರ್ಜೋ ಎಂದು ಗುರುತಿಸಲಾಗಿದೆ.

ಮೃತರಲ್ಲಿ ಛತ್ತೀಸ್‌ಗಢ ಪೊಲೀಸರೊಂದಿಗೆ ಕೆಲಸ ಮಾಡುವ ಮುಖ್ಯ ಪೇದೆ ಕೂಡ ಸೇರಿದ್ದಾರೆ. ಪೊಲೀಸರು ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದಾಗ ಮನೆಯವರು ವಾಮಾಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಇದರಿಂದ ಹಳ್ಳಿಯ ಮಕ್ಕಳಿಗೆ ಆರೋಗ್ಯ ಸಮಸ್ಯೆಗಳು ಮತ್ತು ಜನರಿಗೆ ವೈಯಕ್ತಿಕ ಹಾನಿ ಉಂಟಾಗುತ್ತದೆ ಎಂದು ಅವರು ನಂಬಿದ್ದರು. ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಜಿ ಚವಾಣ್ ತಿಳಿಸಿದ್ದಾರೆ.

ಘಟನೆಯಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಅವರೆಲ್ಲರೂ ಒಂದೇ ಗ್ರಾಮದವರು. ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಮಾಟಮಂತ್ರ ಅಥವಾ ವಾಮಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಕುಟುಂಬದ ವಿರುದ್ಧ ಈ ಹಿಂದೆ ಯಾವುದಾದರೂ ವಿವಾದವಿದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande