ರಾಹುಲ್ ಗಾಂಧಿಗೆ ಭಯೋತ್ಪಾದನೆಗೆ ತಳ್ಳುವ ಉದ್ದೇಶ : ಅಮಿತ್ ಶಾ
ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಜಮ್ಮು ಕಾಶ್ಮೀರವನ್ನು ಮತ್ತೆ ಭಯೋತ್ಪಾದನೆಗೆ ತಳ್ಳಲು ಬಯಸುತ್ತಿವೆ: ಅಮಿತ್ ಶಾ
Amit Shah


ದೋಡಾ, 16 ಸೆಪ್ಟೆಂಬರ್(ಹಿ.ಸ.) :

ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಪ್ರಚಾರದ ಕೊನೆಯ ದಿನವಾದ ಸೋಮವಾರ, ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ, ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕ ರಾಹುಲ್ ಗಾಂಧಿ ಈ ಪ್ರದೇಶವನ್ನು ಮತ್ತೆ ಭಯೋತ್ಪಾದನೆಗೆ ತಳ್ಳುವ ಉದ್ದೇಶ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಚುನಾವಣಾ ಕಣದಲ್ಲಿರುವ ಕೇಂದ್ರಾಡಳಿತ ಪ್ರದೇಶದಲ್ಲಿ ಬಿಜೆಪಿಯ ಪ್ರಚಾರ ಮಾಡುತ್ತಿರುವ ಶಾ, ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷವಾದ ನ್ಯಾಷನಲ್ ಕಾನ್ಫರೆನ್ಸ್ ಭಯೋತ್ಪಾದನೆಯ ಬಗ್ಗೆ ‘ಮೃದು’ವಾಗಿದೆ. ಅವರ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದರೆ ಅವರು ಭಯೋತ್ಪಾದಕರು ಮತ್ತು ಕಲ್ಲು ತೂರಾಟಗಾರರನ್ನು ಜೈಲಿನಿಂದ ಬಿಡುಗಡೆ ಮಾಡುವ ಯೋಜನೆ ಇದೆ ಎಂದು ಪದೇ ಪದೇ ಹೇಳಿಕೊಂಡಿದ್ದಾರೆ.

ಆದಾಗ್ಯೂ, ಅಮಿತ್ ಶಾ ಅವರ ಈ ವಾದವನ್ನುಈಗಾಗಲೇ ಎನ್‌ಸಿ ಉಪಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಳ್ಳಿಹಾಕಿದ್ದಾರೆ.

ಮತ್ತೊಮ್ಮೆ ಇಲ್ಲಿ ಭಯೋತ್ಪಾದನೆಗೆ ಬೆಂಬಲ ನೀಡುವ ಪ್ರಯತ್ನಗಳು ನಡೆಯುತ್ತಿವೆ. ಎನ್‌ಸಿ ಮತ್ತು ಕಾಂಗ್ರೆಸ್ ಗೆದ್ದರೆ ಈ ಭಯೋತ್ಪಾದಕರನ್ನು ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿವೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ (ಕೇಂದ್ರದಲ್ಲಿ) ಇರುವವರೆಗೆ, ಯಾರೂ ಭಾರತದ ನೆಲದಲ್ಲಿ ಭಯೋತ್ಪಾದನೆಯನ್ನು ಹರಡಲು ಧೈರ್ಯ ಮಾಡುವುದಿಲ್ಲ ಎಂದು ನಾನು ಇಂದು ನಿಮಗೆ ಭರವಸೆ ನೀಡುತ್ತೇನೆ ಎಂದು ಕಿಶ್ತ್ವಾರ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಶಾ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande