ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವವರೆಗೆ ನಿರಂತರ ಹೋರಾಟ
ಹುಬ್ಬಳ್ಳಿ, 16 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ವಕೀಲರ ಮೂಲಕ ಇದೇ ದಿ.20ರಂದು ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು,
Swamiji p/c


ಹುಬ್ಬಳ್ಳಿ, 16 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ವಕೀಲರ ಮೂಲಕ ಇದೇ ದಿ.20ರಂದು ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, 2 ಎ ಮೀಸಲಾತಿಗಾಗಿ ಬೆಳಗಾವಿಯಲ್ಲಿ ವಕೀಲರ ಮೂಲಕ ಹೋರಾಟ ಮಾಡಲು ನಿರ್ಧಾರ ಮಾಡಲಾಗಿದೆ. ವಕೀಲರ ಮಹಾ ಪರಿಷತ್ತು ರಚಿಸಲು ತೀರ್ಮಾನ ಮಾಡಲಾಗಿದ್ದು, ಮೀಸಲಾತಿ ವಿಚಾರವಾಗಿ ಬೆಳಗಾವಿಯಲ್ಲಿ ಬೃಹತ್ ಸಭೆ ನಡೆಸಲಾಗುವುದು ಎಂದರು. 2ಎ ಮೀಸಲಾತಿ ಚಳುವಳಿ ಹರಿಯುವ ಗಂಗೋತ್ರಿ ಇದ್ದಂತೆ. ಆದೇಶ ಸಿಗುವವರೆಗೂ ಹೋರಾಟ ನಿರಂತರ ಎಂದಿದ್ದಾರೆ.

ರಾಜ್ಯ ಮಟ್ಟದ ವಕೀಲ ಸಮಾಜ ಸಂಘಟನೆ ಮಾಡುತ್ತಿದ್ದೇವೆ. 7ನೇ ಹಂತದ ಹೋರಾಟ ಈಗಾಗಲೇ ಆರಂಭ ಮಾಡಿದ್ದೇವೆ. ಸರ್ಕಾರ ರಚನೆಯಾದ ಮೇಲೆ 20 ಜನ ಶಾಸಕರು ಅಧಿವೇಶನದಲ್ಲಿ ಮಾತನಾಡಲಿಲ್ಲ. ಶಾಸಕರ ಮನೆ ಮನೆಗೆ ತೆರಳಿ ಆಗ್ರಹ ಪತ್ರ ಚಳುವಳಿ ನಡೆಸಿದ್ದೆವೆ. 9 ದಿನಗಳ ಕಾಲ ನಡೆದ ಅಧಿವೇಶನದಲ್ಲಿ ಶಾಸಕರುಗಳು ಸಭಾಧ್ಯಕ್ಷರಿಗೆ ಮನವಿ ಕೊಟ್ಟರೂ ಸಹ ಮುಡಾ, ವಾಲ್ಮೀಕಿ ಹಗರಣಗಳ ನಡುವೆ ಶಾಸಕರ ಧ್ವನಿ ಅಡಗಿಸುವ ಕೆಲಸ ಆಗಿದೆ ಎಂದು ಆರೋಪಿಸಿದ್ದಾರೆ.

ನಮ್ಮ ಸಮಾಜದ ಹೆಚ್ಚಿನ ಜನ ವಕೀಲರಾಗಿದ್ದಾರೆ. ವಕೀಲರ ಮೂಲಕ ಹೋರಾಟ ಮಾಡುವ ಉದ್ದೇಶ ಹೊಂದಿದ್ದು, ಬೆಳಗಾವಿ, ಕೊಪ್ಪಳ, ಬೀದರ, ಯಾದಗಿರಿ ಸೇರಿ ಹಲವು ಜಿಲ್ಲೆಗಳ ವಕೀಲರನ್ನ ಸೇರಿಸಿ ಸಿಎಂ ಗೆ ಮನವಿ ಕೊಡ್ತೇವೆ. ನಮ್ಮ 2ಎ ಮೀಸಲಾತಿಯನ್ನು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ.11 ಜನ ಹಿರಿಯ ವಕೀಲರ ತಂಡ ರಚಿಸಿ ಕಾನೂನು ಹೋರಾಟದ ಕುರಿತು ಚರ್ಚಿಸಲಾಗುವುದು ಎಂದು ಸ್ವಾಮೀಜಿ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande