ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಟೆಂಗಿನಕಾಯಿ
ಹುಬ್ಬಳ್ಳಿ 16 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಕಾಂಗ್ರೆಸ್ ಸರ್ಕಾರದಿಂದ ಅಲ್ಪಸಂಖ್ಯಾತರ ತುಷ್ಟಿಕರಣ ರಾಜಕಾರಣ ನೀತಿಯಿಂದಾಗಿ ರಾಜ್ಯದಲ್ಲಿ ಗಲಭೆಗಳು ಹೆಚ್ಚಾಗುತ್ತಿವೆ ಎಂದು ಬಿಜೆಪಿ ಶಾಸಕ ಶಾಸಕ ಮಹೇಶ್ ಟೆಂಗಿನಕಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್
Tenginkai


ಹುಬ್ಬಳ್ಳಿ 16 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಕಾಂಗ್ರೆಸ್ ಸರ್ಕಾರದಿಂದ ಅಲ್ಪಸಂಖ್ಯಾತರ ತುಷ್ಟಿಕರಣ ರಾಜಕಾರಣ ನೀತಿಯಿಂದಾಗಿ ರಾಜ್ಯದಲ್ಲಿ ಗಲಭೆಗಳು ಹೆಚ್ಚಾಗುತ್ತಿವೆ ಎಂದು ಬಿಜೆಪಿ ಶಾಸಕ ಶಾಸಕ ಮಹೇಶ್ ಟೆಂಗಿನಕಾಯಿ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಹೀಗಾಗಿ ಗಲಭೆಗಳು ನಡೆಯುತ್ತಿವೆ. ಮಂಗಳೂರಿನಲ್ಲಿ ಮುಸ್ಲಿಂ ಸಮುದಾಯದಿಂದ ಈದ್ ಮಿಲಾದ್ ಮೆರವಣಿಗೆ ವಿಷಯಕ್ಕೆ ಸವಾಲ್ ಹಾಕಿದ್ದು ತಪ್ಪು ಎಂದ ಅವರು ಹೀಗೆ ಸವಾಲ್ ಹಾಕುವುದರಿಂದ ಗಲಾಟೆಗಳಿಗೆ ಕಾರಣವಾಗುತ್ತವೆ ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದ್ದರೆ ಇಂತಹ ಘಟನೆ ನಡೆಯುವುದಿಲ್ಲ. ಸರ್ಕಾರ ಅಲ್ಪಸಂಖ್ಯಾತರ ತುಷ್ಟಿಕರಣ ನಿಲ್ಲಿಸಬೇಕು. ರಾಜ್ಯದಲ್ಲಿ ಸಾಲು ಸಾಲು ಗಲಭೆಗಳು ನಡೆಯುತ್ತಿದ್ದರೂ ಕೂಡಾ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಪೊಲೀಸರ ಮೇಲೆ ವಿನಾಕಾರಣ ದಬ್ಬಾಳಿಕೆ, ಒತ್ತಡ ಹಾಕಬಾರದು, ಪೊಲೀಸರಿಗೆ ಸ್ವತಂತ್ರ ಅಧಿಕಾರ ನೀಡಬೇಕು, ಗಲಭೆ ಹಾಗೂ ಗಲಭೆ ಸೃಷ್ಟಿಕರ್ತರ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ‌ ಮುಂದಾಗಬೇಕಿದೆ ಎಂದು ಮಹೇಶ ಟೆಂಗಿಕಾಯಿ ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande