ನೂರು ದಿನಗಳ ಆಡಳಿತದಿಂದ ಸಮಾಜದ ಪರಿವರ್ತನೆಗೆ ಬುನಾದಿ- ಅಶ್ವಿನಿ ವೈಷ್ಣವ್
ನವದೆಹಲಿ, 18 ಸೆಪ್ಟೆಂಬರ್(ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಳೆದ ನೂರು ದಿನಗಳಲ್ಲಿ ಕೈಗೊಂಡಿರುವ ಹಲವು ಮಹತ್ವದ ನಿರ್ಧಾರಗಳು ಸಮಾಜದ ಪ್ರತಿಯೊಂದು ವರ್ಗದ ಸಾಕಾರಾತ್ಮಕ ಪರಿವರ್ತನೆಗೆ ಕಾರಣವಾಗಿವೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಹ
Ashwini Vaishnaw


ನವದೆಹಲಿ, 18 ಸೆಪ್ಟೆಂಬರ್(ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಳೆದ ನೂರು ದಿನಗಳಲ್ಲಿ ಕೈಗೊಂಡಿರುವ ಹಲವು ಮಹತ್ವದ ನಿರ್ಧಾರಗಳು ಸಮಾಜದ ಪ್ರತಿಯೊಂದು ವರ್ಗದ ಸಾಕಾರಾತ್ಮಕ ಪರಿವರ್ತನೆಗೆ ಕಾರಣವಾಗಿವೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಅವರು ಸುದ್ದಿಗಾರರ ಜೊತೆ ಮತನಾಡಿ, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ೩ ಕೋಟಿ ಮನೆಗಳನ್ನು ನಿರ್ಮಾಣ ಮಾಡಲಾಗುವುದು. ಆಯುಷ್ಮಾನ್ ಭಾರತ ಯೋಜನೆಯಡಿ ೭೦ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಪ್ರತಿವರ್ಷ ೫ ಲಕ್ಷ ರೂಪಾಯಿವರೆಗೆ ವಿಮಾ ಸೌಲಭ್ಯ ಒದಗಿಸಲಾಗುವುದು. ಉದ್ಯೋಗ ಸೃಷ್ಟಿಗೆ ನೆರವು ನೀಡಲು ಉದ್ಯೋಗಾಧಾರಿತ ಉಪಕ್ರಮ ಯೋಜನೆಗಳಿಗೆ ಚಾಲನೆ ನೀಡಲಾಗಿದೆ ಎಂದರು.

ಕಳೆದ ನೂರು ದಿನಗಳಲ್ಲಿ ರೈತರಿಗಾಗಿ ೮ ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಪ್ರಧಾನಿ ಅವರು ಕಳೆದ ಎರಡು ಅವಧಿಯಲ್ಲಿ ಹೊಸ ರೀತಿಯಲ್ಲಿ ಜನರಿಗಾಗಿ ಕಾರ್ಯ ನಿರ್ವಹಿಸುವುದನ್ನು ತೋರಿಸಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರಗಳಿಂದ ಬಡವರು, ಮಧ್ಯಮ ವರ್ಗದವರು, ರೈತರು ಹಾಗೂ ಯುವಜನತೆಯ ಜೀವನದಲ್ಲಿ ಭಾರಿ ಬದಲಾವಣೆಯಾಗಿದೆ ಎಂದರು.

ಹಿಂದಿನ ಕಾಂಗ್ರೆಸ್ ಸರ್ಕಾರ ೫೮ ವರ್ಷಗಳ ಅವಧಿಯಲ್ಲಿ ರೈಲ್ವೆ ವಲಯವನ್ನು ಸಂಪೂರ್ಣ ನಿರ್ಲಕ್ಷ್ಯಿಸಿತ್ತು. ಆದರೆ ಎನ್ ಡಿಎ ಸರ್ಕಾರ ರೈಲ್ವೆ ಅಭಿವೃದ್ಧಿಗೆ ಕಳೆದ ಹತ್ತು ವರ್ಷಗಳಲ್ಲಿ ಹೆಚ್ಚಿನ ಒತ್ತು ನೀಡಿರುವುದರಿಂದ ಸಾಕಷ್ಟು ಬದಲಾವಣೆಗಳಾಗಿವೆ ಮತ್ತು ಸರ್ಕಾರ ರೈಲ್ವೆ ಪ್ರಯಾಣಿಕರ ಸುರಕ್ಷತೆ ಮತ್ತು ಭದ್ರತೆಗೆ ಮೊದಲ ಆದ್ಯತೆ ನೀಡಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande