ಸಿರುಗುಪ್ಪದಲ್ಲಿ ನಾಡಿದ್ದು ವಿದ್ಯುತ್ ವ್ಯತ್ಯಯ
ಸಿರುಗುಪ್ಪ, 18 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಸಿರುಗುಪ್ಪದ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಮಾಸಿಕ ಕಾರ್ಯ ಹಮ್ಮಿಕೊಳ್ಳುತ್ತಿರುವುರಿಂದ ಸೆ.20 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ತಾಲ್ಲೂಕಿನ ವಿವಿಧ ಗ್ರಾ.ಪಂ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್
ಸಿರುಗುಪ್ಪದಲ್ಲಿ ನಾಡಿದ್ದು ವಿದ್ಯುತ್ ವ್ಯತ್ಯಯ


ಸಿರುಗುಪ್ಪ, 18 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್: ಸಿರುಗುಪ್ಪದ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಮಾಸಿಕ ಕಾರ್ಯ ಹಮ್ಮಿಕೊಳ್ಳುತ್ತಿರುವುರಿಂದ ಸೆ.20 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ತಾಲ್ಲೂಕಿನ ವಿವಿಧ ಗ್ರಾ.ಪಂ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂನ ಕಾರ್ಯ ಮತ್ತು ಪಾಲನಾ ಉಪ-ವಿಭಾಗ ಸಿರುಗುಪ್ಪದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

*ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು:*

ಸಿರುಗುಪ್ಪನಗರ, ಬಾಗೇವಾಡಿ, ದೇಶನೂರು, ಕೆಂಚನಗುಡ್ಡ, ದೇವಲಾಪುರ, ಬಗ್ಗೂರು, ರಾರಾವಿ ಚಾಣಕನೂರು, ಕೆ.ಸೂಗೂರು, ಬಿ.ಎಂ ಸೂಗೂರು, ರಾವಿಹಾಳು, ಬೀರಳ್ಳಿ, ಹಚ್ಚೋಳ್ಳಿ, ಕುಡುದರಹಾಳು, ಕುರುವಳ್ಳಿ, ಕೆ.ಬೆಳಗಲ್, ಅರಳಿಗನೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande