ಮಕ್ಕಳ ದಿನಾಚರಣೆ: ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಹೊಸಪೇಟೆ , 19 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : 2024ರ ಮಕ್ಕಳ ದಿನಾಚರಣೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನ
ಮಕ್ಕಳ ದಿನಾಚರಣೆ: ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ


ಹೊಸಪೇಟೆ , 19 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : 2024ರ ಮಕ್ಕಳ ದಿನಾಚರಣೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅಕ್ಟೋಬರ್ 03 ಕೊನೆಯ ದಿನಾಂಕವಾಗಿರುತ್ತದೆ.

ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ' ಶೌರ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ. ಈ ಪ್ರಕರಣವು 01.08.2023 ರಿಂದ 31.07.2024 ರೊಳಗೆ ನಡೆದಿರಬೇಕು. ದಿನಾಂಕ: 01.08.2006 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.

ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು. ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಹೊಸಪೇಟೆಯ 16ನೇ ವಾಡ್ರ್ನ ಬಸವೇಶ್ವರ ಬಡಾವಣೆ, ಸಪ್ತಗಿರಿ ಶಾಲೆಯ ಹತ್ತಿರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪಡೆದು, ಕನ್ನಡ ಭಾμÉಯಲ್ಲಿಯೇ ಭರ್ತಿ ಮಾಡಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande