ಟಾಸ್ ಗೆದ್ದ ಬಾಂಗ್ಲಾದೇಶ್,ಟೀಮ್ ಇಂಡಿಯಾ ಮೊದಲ ಇನಿಂಗ್ಸ್ ಆರಂಭ
ಟಾಸ್ ಗೆದ್ದ ಬಾಂಗ್ಲಾದೇಶ್,ಟೀಮ್ ಇಂಡಿಯಾ ಮೊದಲ ಇನಿಂಗ್ಸ್ ಆರಂಭ
ಟಾಸ್ ಗೆದ್ದ ಬಾಂಗ್ಲಾದೇಶ್,ಟೀಮ್ ಇಂಡಿಯಾ ಮೊದಲ ಇನಿಂಗ್ಸ್ ಆರಂಭ


ಚೆನ್ನೈ,19 ಸೆಪ್ಟೆಂಬರ್(ಹಿ.ಸ.) :

ಆ್ಯಂಕರ್ : ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬಾಂಗ್ಲಾದೇಶ್ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂತೊ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ ಆರಂಭಿಸಲಿದೆ.

ಇನ್ನು ಈ ಪಂದ್ಯಕ್ಕಾಗಿ ಭಾರತ ತಂಡವು ಬಲಿಷ್ಠ ಬಳಗವನ್ನೇ ಕಣಕ್ಕಿಳಿಸಿದೆ. ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಶುಭ್​ಮನ್ ಗಿಲ್ 3ನೇ ಕ್ರಮಾಂಕದಲ್ಲಿ ಆಡಿದರೆ, ವಿರಾಟ್ ಕೊಹ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ 5ನೇ ಮತ್ತು 6ನೇ ಕ್ರಮಾಂಕಗಳಲ್ಲಿ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಕಣಕ್ಕಿಳಿಯಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande